ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ ಹಸಿರು ನಗರವ‌ನ್ನಾಗಿಸಲು ಕ್ರಮ

ಸ್ಮಾರ್ಟ್ ಸಿಟಿ: ₹15 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಚಿವರಿಂದ ಭೂಮಿಪೂಜೆ
Last Updated 4 ಜುಲೈ 2020, 15:07 IST
ಅಕ್ಷರ ಗಾತ್ರ

ದಾವಣಗೆರೆ: ಸ್ಮಾರ್ಟ್‌ಸಿಟಿಯ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಶನಿವಾರ ಭೂಮಿಪೂಜೆ ನೆರವೇರಿಸಿದರು.

ಚಿಗಟೇರಿ ಆಸ್ಪತ್ರೆಯ ವೇಳೆ ಚಾಲನೆ ನೀಡಿದ ಬಳಿಕ ಸಚಿವ ಬೈರತಿ ಬಸವರಾಜ ಮಾತನಾಡಿ, ‘ದಾವಣಗೆರೆಯನ್ನು ಹಸಿರುನಗರವನ್ನಾಗಿ ಮಾಡಲು 6,500 ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಸ್ಮಾರ್ಟ್‌ಸಿಟಿ ಯೋಜನೆಯಡಿ ₹ 15 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ತಿಳಿಸಿದರು.

ದಾವಣಗೆರೆಯ ಪಿ.ಬಿ.ರಸ್ತೆಯಲ್ಲಿ ₹4.14 ಕೋಟಿ ವೆಚ್ಚದಲ್ಲಿ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರ್ಟ್‌ಸಿಟಿ ರಸ್ತೆ ಅರಣ್ಯೀಕರಣ ಯೋಜನೆಗೆ ಚಾಲನೆ ನೀಡಿದರು.

ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ₹3.9 ಕೋಟಿ ವೆಚ್ಚದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕಾಮಗಾರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದ್ದು, 12 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. 1,452 ಚದರ ಮೀಟರ್ ವಿಸ್ತೀರ್ಣದ ಈ ಕಟ್ಟಡದಲ್ಲಿ ಟಿಂಕರಿಂಗ್ ಲ್ಯಾಬ್, ಇನ್‌ಕ್ಯುಬೇಷನ್ ಸೆಂಟರ್, ಇನ್ನೋವೇಷನ್ ಸೆಂಟರ್, ಸೆಮಿನಾರ್ ಹಾಲ್, ಸಿಬ್ಬಂದಿ ಕೊಠಡಿ, ಕ್ಯಾಂಟೀನ್ ಹಾಗೂ ಶೌಚಾಲಯಗಳನ್ನು ಒಳಗೊಂಡಿದೆ.

₹1.28 ಕೋಟಿ ವೆಚ್ಚದಲ್ಲಿ ಹೈಸ್ಕೂಲ್ ಮೈದಾನದಲ್ಲಿರುವ ಟೆನಿಸ್ ಕ್ರೀಡಾಂಗಣ ಪುನಶ್ಚೇತನ ಕಾಮಗಾರಿ, ₹2.62 ಕೋಟಿ ವೆಚ್ಚದಲ್ಲಿ ಮತ್ತಿಕಾಳ ಮತ್ತು ಬೇತೂರು ಹಳ್ಳದವರೆಗೆ ಹಾಗೂ ₹2.67 ಕೋಟಿ ವೆಚ್ಚದಲ್ಲಿ ಎಬಿಡಿ ಅಡಿಯಲ್ಲಿ ಒಳಚರಂಡಿ ಕಾಮಗಾರಿ, 4.14 ಕೋಟಿ ವೆಚ್ಚದಲ್ಲಿ ಅರಣೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸಿಇಒ ಪದ್ಮಾ ಬಸವಂತಪ್ಪ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT