ಬುಧವಾರ, ಜನವರಿ 20, 2021
27 °C

ಹೋಟೆಲ್‌ಗೆ ತೆರಳಿದ ವೇಳೆ ಮನೆಯಲ್ಲಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸಮೀಪದ ಕಾಕನೂರು ಗ್ರಾಮದ ಮನೆಯೊಂದರಲ್ಲಿ ಕಳ್ಳರು ಬಂಗಾರದ ಆಭರಣ ಹಾಗೂ ನಗದನ್ನು ಕಳ್ಳತನ ಮಾಡಿದ್ದಾರೆ.

ಸುಮಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರು ವ್ಯಾಪಾರಕ್ಕಾಗಿ ಹೋಟೆಲ್‌ಗೆ ತೆರಳಿದ ಬಳಿಕ ಮನೆಯ ಬೀಗ ಮುರಿದ ಕಳ್ಳರು ₹1.85 ಲಕ್ಷ ಮೌಲ್ಯದ ಆಭರಣಗಳು ಹಾಗೂ ₹30 ಸಾವಿರ ಕಳ್ಳತನ ಮಾಡಿದ್ದಾರೆ. ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡಿದ್ದ ವ್ಯಕ್ತಿ ಸಾವು
ದಾವಣಗೆರೆ: ಜಗಳೂರು ತಾಲ್ಲೂಕಿನ ಮೂಡಲಮಾಚಿಕೆರೆ ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಹನುಮಂತಪ್ಪ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.