ಬುಧವಾರ, ಜನವರಿ 20, 2021
26 °C

ಅಂಚೆ ಕಚೇರಿಯಲ್ಲಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಿಹರ: ತಾಲ್ಲೂಕಿನ ಗುತ್ತೂರು ಅಂಚೆ ಕಚೇರಿಯ ಬಾಗಿಲು ಮುರಿದ ಕಳ್ಳರು ಪಾರ್ಸೆಲ್ ಅನ್ನು ಹರಿದು ₹ 1575 ಕಳ್ಳತನ ಮಾಡಿದ್ದಾರೆ.

ಕರ್ತವ್ಯ ಮುಗಿಸಿದ ಸಿಬ್ಬಂದಿ ಲತಾ ಅವರು ಪೋಸ್ಟ್ ಆಫೀಸ್‌ನ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಬೆಳಿಗ್ಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. 

ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ನಿಯಂತ್ರಣ ತಪ್ಪಿ ಸವಾರ ಸಾವು
ದಾವಣಗೆರೆ:
ಇಲ್ಲಿನ ಕುಂದವಾಡ ಸಮೀಪದ ರವಿ ಡಾಭಾದ ಬಳಿ ಬೈಕ್ ನಿಯಂತ್ರಣ ತಪ್ಪಿ ಸವಾರರೊಬ್ಬರು ಮಂಗಳವಾರ ರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಎಸ್.ಎಂ. ಕೃಷ್ಣನಗರ 1ನೇ ಹಂತದ ನಿವಾಸಿ ಬಸವರಾಜ ಪಿ (36) ಮೃತಪಟ್ಟವರು. ರಾಣೇಬೆನ್ನೂರು ತಾಲ್ಲೂಕಿನ ಅರೇಮಲ್ಲಾಪುರದ ತಮ್ಮ ಸಂಬಂಧಿಕರ ಮನೆಗೆ ಹೋಗುತ್ತಿರುವಾಗ ಅಪಘಾತವಾಗಿದೆ. ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.