ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕರ ಸಮಸ್ಯೆ ಪರಿಹರಿಸಲು ಹೋರಾಟ: ಲೋಕೇಶ್ ತಾಳಿಕಟ್ಟೆ

Published 24 ಮೇ 2024, 13:29 IST
Last Updated 24 ಮೇ 2024, 13:29 IST
ಅಕ್ಷರ ಗಾತ್ರ

ದಾವಣಗೆರೆ: ‘ಶಿಕ್ಷಣ ಕ್ಷೇತ್ರದಲ್ಲಿ ಎರಡು ದಶಕದಿಂದ ಸೇವೆ ಸಲ್ಲಿಸುತ್ತಿರುವ ನಾನು ಶಿಕ್ಷಣ ಸಂಸ್ಥೆ, ಶಿಕ್ಷಕರನ್ನು ಒಂದುಗೂಡಿಸಿ ಪಕ್ಷಾತೀತ ನೆಲೆಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದು, ಈ ಹೋರಾಟ ಮುಂದುವರಿಸುತ್ತಲೇ ನಿಮ್ಮ ಧ್ವನಿಯಾಗಲು ಬಯಸಿದ್ದೇನೆ. ಆದ್ದರಿಂದ ನನ್ನನ್ನು ಬೆಂಬಲಿಸಬೇಕು’ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿದರು.

‘ರಾಜ್ಯದಲ್ಲಿ 2 ಲಕ್ಷ ಶಿಕ್ಷಕರ ಹುದ್ದೆ ಖಾಲಿ ಇದ್ದು, 7,000 ಅನುದಾನಿತ ಶಾಲೆಗಳು ಮುಚ್ಚಿವೆ. ಕಾರ್ಯನಿರ್ವಹಿಸುತ್ತಿರುವ ಆರು ಸಾವಿರ ಶಾಲೆಯಲ್ಲಿ ಬಹಳ ವರ್ಷಗಳಿಂದ ಶಿಕ್ಷಕರ ನೇಮಕಾತಿಯೇ ಆಗಿಲ್ಲ. ಹೈಕೋರ್ಟ್ ಆದೇಶ ಮಾಡಿದ್ದರೂ ನೇಮಕ ಮಾಡಿಲ್ಲ. 70 ಸಾವಿರ ಅನುದಾನಿತ ಶಿಕ್ಷಕರಿಗೆ ಒಪಿಎಸ್ ಜಾರಿಯಾಗಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಕರ ಸಮಸ್ಯೆ ಬಗೆಹರಿಸುವ ಹೋರಾಟ ನಡೆಸಲಾಗುವುದು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಭರವಸೆ ನೀಡಿದರು.

‘ಶಿಕ್ಷಕನಾಗಿ ಕಾರ್ಯ ನಿರ್ವಹಿಸಿರುವ ನನಗೆ ಶಿಕ್ಷಕರ ಎಲ್ಲ ಸಮಸ್ಯೆಗಳ ಬಗ್ಗೆ ಸಮಗ್ರ ಅರಿವಿದೆ. ನಾನು ರಾಜಕಾರಣಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಶಿಕ್ಷಕರ ಸಮಸ್ಯೆಗಳನ್ನು ನಾವೇ ಮಂಡಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶ ನನ್ನದು. ಯಾವುದೇ ಪಕ್ಷ ಆಯ್ಕೆ ಮಾಡಿಕೊಳ್ಳದೇ ಶಿಕ್ಷಕರ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದು, ಶಿಕ್ಷಕರ ಹಲವು ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ಮಾಡಿರುವ ತಮ್ಮನ್ನು ಆಯ್ಕೆ ಮಾಡಬೇಕು’ ಎಂದು ಮನವಿ ಮಾಡಿದರು.

‘ಈ ಕ್ಷೇತ್ರದಲ್ಲಿ ಆಯ್ಕೆಯಾದವರು ಶಿಕ್ಷಕರ ಒಂದೂ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಿಲ್ಲ. ಅವರು ಚುನಾವಣೆ ಸೇರಿದಂತೆ ಬೇರೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳಬೇಕಿದೆ’ ಎಂದು ಹೇಳಿದರು.

ನಾನು ಕಾಂಗ್ರೆಸ್ ಸದಸ್ಯ ಅಲ್ಲ:

‘ಇತ್ತೀಚೆಗೆ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ ಎಂಬ ಮಾಹಿತಿ ತಿಳಿದಿದ್ದು, ಆದರೆ ನಾನು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಂ. ಉಮಾಪತಯ್ಯ, ಕೆ.ಎಸ್. ಪ್ರಭುಕುಮಾರ್, ಎಚ್.ಜಿ. ಪ್ರಕಾಶ್, ಅಸಾದುಲ್ಲ, ಸೈಯದ್ ಸುಬಾನ್, ಮುಪ್ಪಣ್ಣ ಬಾದಾಮಿ, ಎಸ್.
ಆರ್. ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT