ಶನಿವಾರ, ಜೂನ್ 6, 2020
27 °C

ಗುಂಡಿಯಲ್ಲಿ ಬಿದ್ದು ವಿದ್ಯಾರ್ಥಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ತಾಲ್ಲೂಕಿನ ಆನಗೋಡು ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ನೀರು ತುಂಬಿದ್ದ ಗುಂಡಿಯೊಳಗೆ ಆಕಸ್ಮಿಕವಾಗಿ ಬಿದ್ದು, ಸಾವನ್ನಪ್ಪಿದ್ದಾನೆ.

ಎಚ್‌.ಟಿ.ವೀರೇಶ ಅವರ ಪುತ್ರ ಪೃಥ್ವಿರಾಜ್ ಎಚ್.ವಿ. ಮೃತಪಟ್ಟ ಬಾಲಕ. ಗುರುವಾರ ಸಂಜೆ ಆಟವಾಡಲು ಹೋದ ಬಾಲಕ ಮನೆಗೆ ಬಾರದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದಾಗ ವೆಂಕಟೇಶ್ ಎಂಬುವರ ಸೈಟ್‌ನಲ್ಲಿ ತೆಗೆದಿರುವ ಗುಂಡಿಯೊಳಗೆ ಬಿದ್ದು ಮೃತಪಟ್ಟಿದ್ದಾನೆ.

ಈಜುಗಾರರನ್ನು ಕರೆಸಿ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು