ಸೋಮವಾರ, ಜನವರಿ 17, 2022
19 °C

ಮಲೇಬೆನ್ನೂರು: ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು  ಪತ್ತೆಯಾಗಿದೆ.

ವಿದ್ಯಾರ್ಥಿಗಳಲ್ಲಿ ಕೋವಿಡ್‌ ಕಾಣಿಸಿಕೊಂಡಿರುವುದರಿಂದ ಜಿಲ್ಲಾಧಿಕಾರಿ ಆದೇಶದಂತೆ ಕಾಲೇಜನ್ನು ಸೀಲ್‌ಡೌನ್‌ ಮಾಡಲಾಗಿದೆ. ಪುರಸಭೆ ಸಿಬ್ಬಂದಿ ಕಾಲೇಜಿನ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಿದ್ದಾರೆ. ಕಾಲೇಜಿಗೆ ಒಂದು ವಾರ ರಜೆ ಘೋಷಿಸಲಾಗಿದೆ.

ಬುಧವಾರ ಈ ಕಾಲೇಜಿನ ವಿದ್ಯಾರ್ಥಿಗಳ ಗಂಟಲಿನ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಗುರುವಾರ ರಾತ್ರಿ ವರದಿ ಲಭಿಸಿದ್ದು, 15 ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ದೃಡಪಟ್ಟಿದೆ. ತಹಶೀಲ್ದಾರ್‌ ರಾಮಚಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಡಿ.ಜಿ. ರಾಘವನ್‌, ಡಾ. ನಟರಾಜ್‌, ಮುಖ್ಯಾಧಿಕಾರಿ ರುಕ್ಮಿಣಿ, ಉಪ ತಹಶೀಲ್ದಾರ್‌ ರವಿ ಅವರು ಶುಕ್ರವಾರ ಕಾಲೇಜಿಗೆ ತೆರಳಿ ಪರಿಶೀಲಿಸಿದರು.

ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಕ್ಕದ ಬೀರಲಿಂಗೇಶ್ವರ ಕಾಲೇಜಿನಲ್ಲೂ ಶುಕ್ರವಾರ ವಿದ್ಯಾರ್ಥಿಗಳ ಗಂಟಲಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು