ಅತ್ಯಾಚಾರ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಶನಿವಾರ, ಜೂಲೈ 20, 2019
24 °C

ಅತ್ಯಾಚಾರ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:
Prajavani

ದಾವಣಗೆರೆ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಹಪಾಠಿಗಳೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವುದಲ್ಲದೆ ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ವಿಕೃತಿ ಮೆರೆದಿದ್ದಾರೆ. ಇದು ಖಂಡನೀಯ. ಇಂತಹ ಅಮಾನವೀಯ ಕೃತ್ಯದಲ್ಲಿ ಭಾಗಿಯಾದವರು ಯಾರೇ ಆಗಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆರೋಪಿಗಳು ಎಬಿವಿಪಿ ಸಂಘಟನೆಗೆ ಸೇರಿದ್ದಾರೆ ಎಂಬ ಆರೋಪ ಇದ್ದರೂ ಸಂಬಂಧಪಟ್ಟವರು ಚಕಾರ ಎತ್ತುತ್ತಿಲ್ಲ. ಸರ್ಕಾರ ಶೀಘ್ರ ಪ್ರಕರಣ ಸಂಬಂಧ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ದೇಶದ ಅಭಿವೃದ್ಧಿಗೆ ಮಹಿಳೆಯರನ್ನು ಗೌರವಿಸುವ ಅವರಿಗೆ ಎಲ್ಲ ಸಾಂವಿಧಾನಿಕ ಹಕ್ಕುಗಳನ್ನು ಖಾತ್ರಿ ಪಡಿಸುವ ಸಮಾಜ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಫೆಡರೇಷನ್‌ನ ರಾಜ್ಯ ಸಹ ಕಾರ್ಯದರ್ಶಿ ಕೊಟ್ರೋಶ್‌, ರಾಜ್ಯ ಉಪಾಧ್ಯಕ್ಷೆ ವೀಣಾ, ಎಲ್‌.ವೈ, ಕೆ. ತಿಪ್ಪೇಸ್ವಾಮಿ ಸೇರಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !