ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಸಿಗೆ ಶಿಬಿರಗಳು ಮುಂದಿನ ಶೈಕ್ಷಣಿಕ ವರ್ಷದ ಬುನಾದಿ: ಎಂ.ಎನ್. ಶ್ರೀಧರಮಯ್ಯ

Published 17 ಮೇ 2024, 14:17 IST
Last Updated 17 ಮೇ 2024, 14:17 IST
ಅಕ್ಷರ ಗಾತ್ರ

ಕಡರನಾಯ್ಕನಹಳ್ಳಿ: ‘ಬೇಸಿಗೆ ಶಿಬಿರಗಳು ಮುಂದಿನ ಶೈಕ್ಷಣಿಕ ವರ್ಷದ ಬುನಾದಿ. ಶಿಬಿರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಗಲ್ಲಾಗಲಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಗೌರವ ನೀಡುವುದರಿಂದ ಮುಂದಿನ ಕಲಿಕೆಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದು ರಾಜ್ಯ ಸಂಪನ್ಮೂಲ ವ್ಯಕ್ತಿ, ವಿಜ್ಞಾನ ಶಿಕ್ಷಕ ಎಂ.ಎನ್. ಶ್ರೀಧರಮಯ್ಯ ತಿಳಿಸಿದರು.

ಭಾನುವಳ್ಳಿ ಗ್ರಾಮದ ವಿನಾಯಕ ವಿದ್ಯಾದಾನ ಸಮಿತಿ ವತಿಯಿಂದ ಏರ್ಪಡಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮತ್ತು ಎಸ್ಎಸ್ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

‘ಗ್ರಾಮೀಣ ಪ್ರದೇಶದಲ್ಲಿ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಆ ಕಾರಣದಿಂದ ಗ್ರಾಮೀಣ ಪ್ರತಿಭೆಗಳು ಹೊರಬರುತ್ತಿವೆ’ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಜೆ.ಆರ್ ಮಂಜುನಾಥ್ ಹೇಳಿದರು. 

ವಿದ್ಯಾದಾನ ಸಮಿತಿ ಪ್ರೌಢಶಾಲೆ, ಕೆಪಿಎಸ್ ಭಾನುವಳ್ಳಿ, ಬೆಳ್ಳೂಡಿ, ಕಡರನಾಯ್ಕನಹಳ್ಳಿ, ಬಿಳಸನೂರು, ಹೊಸಳ್ಳಿ, ಬೂದಿಹಾಳ್ ಗ್ರಾಮದ ಪ್ರೌಢಶಾಲೆಗಳಲ್ಲಿ ಎಸ್‌ಎಸ್ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT