ದಾವಣಗೆರೆ: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದ ಮೂವರು ನೌಕರರನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಉತ್ತರ ವಲಯದ ಜಮಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ ಡಿ.ಕೆ., ದಾವಣಗೆರೆ ದಕ್ಷಿಣ ವಲಯದ ನಾಗನೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜಪ್ಪ ಎಚ್. ಹಾಗೂ ಮಾಯಕೊಂಡದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ದುರ್ಗಪ್ಪ ಕೆ.ಆರ್. ಅಮಾನತುಗೊಂಡವರು.

‘ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದರೂ, ನೌಕರರು ಗೈರಾಗಿದ್ದರು. ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿ ನೋಟಿಸ್ ನೀಡಿದರೂ, ಉತ್ತರ ನೀಡಿರಲಿಲ್ಲ. ಮೂವರು ನೌಕರರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಕರ್ನಾಟಕ ಸರ್ಕಾರಿ ಸಿವಿಲ್ ವರ್ಗೀಕರಣ ಮತ್ತು ಅಪೀಲು ನಿಯಮಾವಳಿ 1957ರ ನಿಯಮ 10(1)(d) ಅನ್ವಯ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.