ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥೆಟಿಕ್ ಟ್ರ್ಯಾಕ್: ಸಂಸದ ಜಿ.ಎಂ. ಸಿದ್ದೇಶ್ವರ

ಸಂಸದ ಜಿ.ಎಂ. ಸಿದ್ದೇಶ್ವರ ಮನವಿ
Last Updated 8 ಆಗಸ್ಟ್ 2021, 4:25 IST
ಅಕ್ಷರ ಗಾತ್ರ

ದಾವಣಗೆರೆ:ಕೇಂದ್ರ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯದಿಂದ ದಾವಣಗೆರೆ ಜಿಲ್ಲಾ ಕ್ರೀಡಾಂಗಣಕ್ಕೆ ‘ಖೇಲೋ ಇಂಡಿಯಾ ಯೋಜನೆಯಡಿ’ 400 ಮೀಟರ್ ಅಥ್ಲೆಟಿಕ್ ಟ್ರ್ಯಾಕ್‍ಗೆ ಸಿಂಥೆಟಿಕ್ ಹಾಕಲು ಹಾಗೂ ಕ್ರೀಡಾ ಚಟುವಟಿಕೆಗೆ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್‍ಸಿಂಗ್ ಠಾಕೂರ್ ಅವರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಭೇಟಿ ಮಾಡಿ ಮನವಿ ಸಲ್ಲಿಸಿದರು.

‘ಜಿಲ್ಲೆಯು ರಾಜ್ಯದ ಮಧ್ಯ ಭಾಗದಲ್ಲಿದ್ದು, ಕ್ರೀಡೆ ಹಾಗೂ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಆನೇಕ ವಿದ್ಯಾರ್ಥಿಗಳು ಬಂದು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು, ಜಿಲ್ಲೆಯಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಆನೇಕ ಕ್ರೀಡಾ ಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ದಾವಣಗೆರೆ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆ ನಡೆಸಲು ಜಿಲ್ಲಾ ಕ್ರೀಡಾಂಗಣದಲ್ಲಿ ಸುಸಜ್ಜಿತ ಸೌಲಭ್ಯವಿಲ್ಲದೇ ಕ್ರೀಡಾ ಪಟುಗಳಿಗೆ ಅಭ್ಯಾಸಕ್ಕಾಗಿ ಅನಾನೂಕೂಲವಾಗುತ್ತಿದೆ, ಖೇಲೋ ಇಂಡಿಯಾ ಯೋಜನೆಯಡಿ 400 ಮೀಟರ್ ಅಥ್ಲೆಟಿಕ್ ಟ್ರ್ಯಾಕ್‍ಗೆ ಸಿಂಥೆಟಿಕ್ ಹಾಕಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ₹7 ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿ, ಪ್ರಸ್ತಾವನೆಯನ್ನು ಮಂಜೂರಾತಿಗಾಗಿ ಕೇಂದ್ರ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಲಾಗಿದೆ’ ಎಂದು ಸಂಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT