ದಾವಣಗೆರೆ: ಜಗಳೂರು ಮಾಜಿ ಶಾಸಕ, ಬಿಜೆಪಿ ಮುಖಂಡ ಟಿ.ಗುರುಸಿದ್ದನಗೌಡ ಅವರು ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಗುರುಸಿದ್ದನಗೌಡ ಅವರೊಂದಿಗೆ ಅವರ ಪುತ್ರ ಆರೈಕೆ ಆಸ್ಪತ್ರೆಯ ಡಾ.ಟಿ.ಜಿ.ರವಿಕುಮಾರ್, ಬಿಜೆಪಿ ಮುಖಂಡರಾದ ಟಿ.ಜಿ.ಅರವಿಂದ್, ಟಿ.ಜಿ.ಪ್ರವೀಣ್, ಕಕ್ಕರಗೊಳ್ಳದ ಕಲ್ಲಿಂಗಪ್ಪ, ನಾಗರಾಜ ಸ್ವಾಮಿ, ಮಟ್ಟಿಕಲ್ಲು ವೀರಭದ್ರಸ್ವಾಮಿ, ಗೌರಿಪುರದ ಶಿವಣ್ಣ ಹಾಗೂ ಮತ್ತಿತರರು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಜಗಳೂರು ಶಾಸಕ ದೇವೇಂದ್ರಪ್ಪ, ಎನ್.ಜಿ.ಪುಟ್ಟಸ್ವಾಮಿ, ಶಿವನಗೌಡ, ಕಮ್ಮತ್ತಹಳ್ಳಿ ಮಂಜುನಾಥ್, ಶ್ಯಾಗಲೆ ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು.

ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ, ‘ಗುರುಸಿದ್ದನಗೌಡ್ರು ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ಸೇರಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಅವರ ಮಾರ್ಗದರ್ಶನದಲ್ಲಿ ನಾವುಗಳು ಮುನ್ನಡೆಯುತ್ತೇವೆ’ ಎಂದರು.

ಡಾ.ಟಿ.ಜಿ. ರವಿಕುಮಾರ್ ಮಾತನಾಡಿ, ‘ಬಿಜೆಪಿ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಇರುವುದನ್ನು ನಾವು ಖಂಡಿಸುತ್ತಾ ಬಂದೆವು. ವಿದ್ಯಾವಂತರಿಗೆ ಅವಕಾಶ ನೀಡುವಂತೆ ಮನವಿ ಮಾಡಿದರೂ, ಹೈಕಮಾಂಡ್ ನಮ್ಮ ಮನವಿಗೆ ಸ್ಪಂದಿಸದೇ ಇರುವುದು ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಏಕ ಸ್ವಾಮ್ಯ ಆಡಳಿತದಿಂದ ಬೇಸತ್ತು ಪಕ್ಷ ತೊರೆದವು’ ಎಂದರು.

‘ಜಿಲ್ಲೆಗೆ ಸಮರ್ಥ ಆಡಳಿತಗಾರ ಮಲ್ಲಿಕಾರ್ಜುನ್ ದೊರೆತಿದ್ದಾರೆ. ಅವರ ಪತ್ನಿ ವಿದ್ಯಾವಂತರಿದ್ದು, ಅವರು ನಮ್ಮನ್ನು ಪ್ರತಿನಿಧಿಸಿದರೆ ಕ್ಷೇತ್ರಕ್ಕೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.