ಭಾನುವಾರ, ಮಾರ್ಚ್ 26, 2023
23 °C

ದಾವಣಗೆರೆ: ನಿರಾಶ್ರಿತರ ಕೇಂದ್ರದಲ್ಲಿ ತಹಶೀಲ್ದಾರ್ ನೃತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ತಾಲ್ಲೂಕಿನ ತುರ್ಚಘಟ್ಟ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಕೇಂದ್ರದಲ್ಲಿ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರು ನೃತ್ಯ ಮಾಡಿ ರಂಜಿಸಿದರು.

ಕೇಂದ್ರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆಯ ವೇಳೆ ‘ಸತ್ಯ ಹರಿಶ್ಚಂದ್ರ’ ಚಿತ್ರದ ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಹಾಗೂ ‘ಆಕಸ್ಮಿಕ’ ಚಿತ್ರದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಹೆಜ್ಜೆ ಹಾಕಿ ಆತ್ಮಸ್ಥೈರ್ಯ ತುಂಬಿದರು.

ನಿರಾಶ್ರಿತರ ಕೇಂದ್ರದ ಪ್ರಭಾರ ಅಧೀಕ್ಷಕಿ ನಳಿನಿ ಅವರು ನಿರಾಶ್ರಿತರಿಗಾಗಿ ಮ್ಯೂಸಿಕಲ್ ಚೇರ್, ಪಾಸಿಂಗ್ ದ ಬಾಲ್ ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಎಲ್ಲರೂ ಪಾಲ್ಗೊಂಡು ಖುಷಿಪಟ್ಟರು. ಊರು ಹಾಗೂ ಮನೆ ಕುಟುಂಬ ಬಿಟ್ಟು ಬಂದಿದ್ದವರಿಗೆ ಹಬ್ಬ ಆಚರಣೆ ಮಾಡಲಿಲ್ಲವಲ್ಲಾ ಎಂಬ ಕೊರಗು ನೀಗಿತು.

‘ನಿರಾಶ್ರಿತರಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿರಾಶ್ರಿತರು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ರಂಜಿಸಿದರು’ ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು