ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣ ಸಂಘದಿಂದ ಪ್ರತಿಭಾ ಪುರಸ್ಕಾರ

Last Updated 30 ಸೆಪ್ಟೆಂಬರ್ 2022, 3:53 IST
ಅಕ್ಷರ ಗಾತ್ರ

ದಾವಣಗೆರೆ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಎಸ್ಸೆಸ್ಸೆಲ್ಸಿ‍ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ವಿಶ್ವಾಮಿತ್ರ’ ಪ್ರತಿಭಾ ಪುರಸ್ಕಾರ ಹಾಗೂ ‘ವಿಪ್ರಶ್ರೀ’ ವಿಪ್ರ ಸಾಧಕರಿಗೆ ಸನ್ಮಾನ ಸಮಾರಂಭ ಅಕ್ಟೋಬರ್‌ 1ರಂದು ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಮಂಡಳಿ ನಿರ್ದೇಶಕ ಪಿ.ಸಿ. ಶ್ರೀನಿವಾಸ್‌ ತಿಳಿಸಿದರು.

ನಗರದ ನಿಜಲಿಂಗಪ್ಪ ಬಡಾವಣೆಯ ನಿಮಿಷಾಂಬ ಸಮುದಾಯ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಡಳಿಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವೂ ನಡೆಯಲಿದೆ. ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಉದ್ಘಾಟಿಸಲಿದ್ದು, ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಚ್ಚಿದಾನಂದ ಮೂರ್ತಿ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ ಸೇರಿ ಹಲವು ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ 12 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, 11 ಪಿಯು ವಿದ್ಯಾರ್ಥಿಗಳಿಗೆ ನಗದು ಹಾಗೂ ಪಾರಿತೋಷಕ ನೀಡಿ ಪುರಸ್ಕರಿಸಲಾಗುವುದು. ಯುಪಿಎಸ್‌ಸಿ ರ‍್ಯಾಂಕ್‌ ವಿಜೇತ ಅವಿನಾಶ್‌ ರಾವ್‌ ಹಾಗೂ ಸ್ಮಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಚನ್ನಗಿರಿಯ ವಿದ್ಯಾರ್ಥಿನಿ ಚೇತನಾ ಅವರನ್ನು ಸನ್ಮಾನಿಸಲಾಗುವುದು ಎಂದರು.

ಹೆಚ್ಚಿನ ಅನುದಾನಕ್ಕೆ ಮನವಿ ಸಲ್ಲಿಸಲಾಗಿದೆ.ಮಂಡಳಿಯಿಂದ ಹಲವು ಯೋಜನೆಗಳಿದ್ದು, ಸಮಾಜದವರು ಸದುಪಯೋಗಪಡಿಸಿಕೊಳ್ಳಬಹುದು. ಮಾಹಿತಿಗೆ 9880564636 ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಸನ್ನ, ಎಂ.ಜಿ. ಶ್ರೀಕಾಂತ್‌, ಪ್ರವೀಣ್‌ ಕುಲಕರ್ಣಿ, ವಿನಯ್‌ ಪದಕಿ, ಅನಿಲ್‌ ಬಾರಂಗಳ್, ರಾಮಣ್ಣ ಶ್ಯಾನುಭಾಗ್‌, ಗುರುರಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT