ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 27ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Last Updated 25 ಫೆಬ್ರುವರಿ 2023, 4:53 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರುವರಿ 27ರಂದು ತಾಲ್ಲೂಕಿನ ಹೊಸ ಬೆಳವನೂರು ಗ್ರಾಮದ ಬಸವೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಸುಮತಿ ಜಯಪ್ಪ ಹೇಳಿದರು.

ಪತ್ರಕರ್ತ, ಸಾಹಿತಿ ಬಿ.ಎನ್‌. ಮಲ್ಲೇಶ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಕನ್ನಡದ ಬೇರು ಅಲುಗಾಡುತ್ತಿದೆ. ಹಳ್ಳಿಗಳಲ್ಲಿ ಕನ್ನಡದ ಜಾಗೃತಿ ಮೂಡಿಸುವ ಉದ್ದೇಶದಿಂದ ಹೊಸ ಬೆಳವನೂರು ಗ್ರಾಮದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಈ ಬಾರಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಬದಲು ವಚನ ಸಾಹಿತ್ಯ, ದಾಸ ಸಾಹಿತ್ಯ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕರ ಕೃತಿಗಳು ಸೇರಿ ಕನ್ನಡದ ಅಮೂಲ‌್ಯ ಕೃತಿಗಳ ಮೆರವಣಿಗೆ ನಡೆಯಲಿದೆ. ಸಮ್ಮೇಳನದ ಅಧ್ಯಕ್ಷರೇ ಮೆರವಣಿಗೆ ಬೇಡ ಎಂದಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಫೆ.27ರಂದು ಬೆಳಿಗ್ಗೆ 8ಕ್ಕೆ ಬೆಳವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಶು ಟಿ.ಎ. ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ (ಕೃತಿಗಳ ಮೆರವಣಿಗೆ)ಗೆ ತಹಶೀಲ್ದಾರ್ ಎಂ.ಬಿ. ಅಶ್ವತ್ಥ ಚಾಲನೆ ನೀಡುವರು. ಸಮ್ಮೇಳನವನ್ನು ಸಾಹಿತಿ ಪ್ರೊ. ಎಸ್‌.ಜಿ. ಸಿದ್ದರಾಮಯ್ಯ ಉದ್ಘಾಟಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್‌, ಎಸ್‌.ಎಸ್‌. ಮಲ್ಲಿಕಾರ್ಜುನ್‌, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಬಿ. ವಾಮದೇವಪ್ಪ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸುವರು ಎಂದರು.

ಸಾಹಿತ್ಯ, ಕವಿಗೋಷ್ಠಿ ನಡೆಯಲಿದೆ. ಸಂಜೆ 4.30ಕ್ಕೆ ಬಹಿರಂಗ ಅಧಿವೇಶನ, ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಸಂಜೆ 6.30ಕ್ಕೆ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಪರಿಷತ್ತಿನ ಜಿ. ಬಸವರಾಜಪ್ಪ, ಜಯಂತ್‌ ಮಹಾಂತೇಶ್‌, ಲಿಂಗರಾಜು ಆನಕೊಂಡ, ಬೇತೂರು ಷಡಕ್ಷರಪ್ಪ, ಶಿವಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT