ಸಂತೇಬೆನ್ನೂರು: ಸಮೀಪದ ತಣಿಗೆರೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಸವಾರರು ಗಾಯಗೊಂಡಿದ್ದಾರೆ.

ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು, ಹಂಪ್ಸ್ ನಿರ್ಮಿಸುವಂತೆ ಪಟ್ಟು ಹಿಡಿದು ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದರು. ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರವರೆಗೆ ವಾಹನ ಸಂಚಾರ ಸ್ಥಗಿತಗೊಂಡಿದ್ದವು. ಎರಡು ಬದಿಯಲ್ಲೂ 1 ಕಿ.ಮೀ.ಗಿಂತ ಹೆಚ್ಚು ದೂರಕ್ಕೆ ವಾಹನಗಳು ಸಾಲುಗಟ್ಟಿದ್ದವು. ಕೆಲ ಕಾರ್, ಬಸ್ಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು.

ಸಿಪಿಐ ಮಲ್ಲಮ್ಮ ಚೌಬೆ ಘಟನಾ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರು. ‘ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದರೂ ಹಂಪ್ಸ್ ನಿರ್ಮಿಸಲು ಮುಂದಾಗಿಲ್ಲ. ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ತಕ್ಷಣವೇ ಹಂಪ್ಸ್ ನಿರ್ಮಿಸಬೇಕು’ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಧಾವಿಸಿ ಪರಿಶೀಲನೆ ನಡೆಸಿದರು. ಭಾನುವಾರವೇ ತಣಿಗೆರೆ ಗ್ರಾಮದಲ್ಲಿ ಎರಡು ಕಡೆ ಹಂಪ್ಸ್ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸಿಪಿಐ ಭರವಸೆ ನೀಡಿದರು. ಗ್ರಾಮಸ್ಥರು ಧರಣಿ ಸ್ಥಗಿತಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಎಸ್ಐ ಚೆನ್ನವೀರಪ್ಪ ಹಾಗೂ ಸಿಬ್ಬಂದಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-43-315083805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.