ಸುರಹೊನ್ನೆ(ನ್ಯಾಮತಿ): ತಾಲ್ಲೂಕಿನ ಸುರಹೊನ್ನೆ ಗ್ರಾಮದ ಪಿಎಂಶ್ರೀ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹ ಶಿಕ್ಷಕರು ಕೈಗೆ ಕಪ್ಪುಪಟ್ಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಾಮಪ್ಪ ಮಾತನಾಡಿ, ಅಖಿಲ ಭಾರತ ಶಿಕ್ಷಕರ ಫೆಡರೇಷನ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೂಚನೆಯಂತೆ ಪ್ರತಿಭಟನೆ ನಡೆಸಿದ್ದೇವೆ ಎಂದರು.

‘ಕೇಂದ್ರ ಮಾದರಿ ವೇತನ ನೀಡಬೇಕು. ಖಾಯಂ ಶಿಕ್ಷಕರ ನೇಮಕಾತಿ, ಒಪಿಎಸ್ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಲೆಯ ಎಲ್ಲಾ ಸಹಶಿಕ್ಷಕರು ತೋಳಿಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ್ದೇವೆ’ ಎಂದು ತಿಳಿಸಿದರು.