ಶನಿವಾರ, ಅಕ್ಟೋಬರ್ 23, 2021
24 °C
ಹಿಂದೂ ಜಾಗರಣ ವೇದಿಕೆಯ ಶಿವಮೊಗ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ

ದೇವಾಲಯ ತೆರವು ಮುಂದುವರಿಸಿದರೆ ಅಧಿಕಾರಿಗಳ ಹೆಣ ಎತ್ತುತ್ತೇವೆ: ಸತೀಶ್‌ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ‘ರಾಜ್ಯದಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ ಮುಂದುವರಿಸಿದರೆ ನಡುಬೀದಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಅಧಿಕಾರಿಗಳ ಹೆಣ ಎತ್ತುತ್ತೇವೆ’ ಎಂದು ಹಿಂದೂ ಜಾಗರಣ ವೇದಿಕೆಯ ಶಿವಮೊಗ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ಸತೀಶ್‌ ಪೂಜಾರಿ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಚ್ಚಗಳ್ಳಿ ಮಹಾದೇವಮ್ಮ ಭೈರವೇಶ್ವರ ಮಂದಿರವನ್ನು ತೆರವುಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅವರ ಈ ಹೇಳಿಕೆಯ ವಿಡಿಯೊ ಶುಕ್ರವಾರ ಎಲ್ಲೆಡೆ ಹರಿದಾಡಿದೆ. 

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸದ ಸತೀಶ್‌ ಪೂಜಾರಿ, ‘ಭೈರವೇಶ್ವರ ಮಂದಿರಕ್ಕೆ ಹಲವು ಶತಮಾನಗಳ ಇತಿಹಾಸ ಇದೆ. ಸ್ವಾತಂತ್ರ್ಯ ಪೂರ್ವದಿಂದಲೂ ಮುಸ್ಲಿಂ ದೊರೆಗಳು, ಬ್ರಿಟಿಷರು ಹಿಂದೂ ದೇವಾಲಯಗಳನ್ನು ತೆರವುಗೊಳಿಸಿದ್ದಾರೆ. ಆಗಲೂ ಪ್ರತಿರೋಧ ವ್ಯಕ್ತವಾಗಿತ್ತು. ಈಗಲೂ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ಉಳಿವಿಗಾಗಿ ತೆರವು ಕಾರ್ಯಾಚರಣೆಗೆ ಪ್ರತಿರೋಧ ಅನಿವಾರ್ಯ. ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ಸರಿಯಾಗಿ ತಿಳಿದುಕೊಳ್ಳದೇ ಅಧಿಕಾರಿಗಳು ಪುರಾತನ ದೇವಾಲಯಗಳನ್ನು ತೆರವುಗೊಳಿಸುತ್ತಿದ್ದಾರೆ. ಇಂತಹ ತೆರವು ಕಾರ್ಯಾಚರಣೆ ಮುಂದುವರಿಸಿದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಯಾವುದೇ ಅಧಿಕಾರಿಗಳ ತಲೆದಂಡ ಮಾಡುತ್ತೇವೆ ಎಂದು ಹೇಳಿದ್ದೆ. ಆದರೆ ನನ್ನ ಹೇಳಿಕೆಯನ್ನು ತಿರುಚಿ ವಿಡಿಯೊ ಹರಿಬಿಡಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು