ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: 19 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆ ಸುಗಮ

Published 30 ಜೂನ್ 2024, 16:24 IST
Last Updated 30 ಜೂನ್ 2024, 16:24 IST
ಅಕ್ಷರ ಗಾತ್ರ

ದಾವಣಗೆರೆ: ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಭಾನುವಾರ ಸುಗಮವಾಗಿ ನಡೆಯಿತು.

ಬೆಳಿಗ್ಗೆ 9.30ರಿಂದ 12ರ ವರೆಗೆ 11 ಕೇಂದ್ರಗಳಲ್ಲಿ ನಡೆದ ಮೊದಲ ಅವಧಿಯ ಪರೀಕ್ಷೆಗೆ 3,805 ಮಂದಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 3,422 ಅಭ್ಯರ್ಥಿಗಳು ಹಾಜರಾಗಿ, 383 ಮಂದಿ ಗೈರಾದರು.

ಮಧ್ಯಾಹ್ನ 2ರಿಂದ 4.30ರ ವರೆಗೆ 19 ಕೇಂದ್ರಗಳಲ್ಲಿ ನಡೆದ ಎರಡನೇ ಅವಧಿಯ ಪರೀಕ್ಷೆಗೆ 6,126 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,690 ಮಂದಿ ಹಾಜರಾದರೆ, 436 ಅಭ್ಯರ್ಥಿಗಳು ಗೈರಾದರು.

‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ವೆಬ್‌ಕಾಸ್ಟಿಂಗ್‌ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಪರೀಕ್ಷೆ ಸುಗಮವಾಗಿ ನಡೆಯಿತು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದರು.

ನಗರದ ಹಲವು ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT