ಸೋಮವಾರ, ಆಗಸ್ಟ್ 8, 2022
23 °C

ಪಠ್ಯ ಲೋಪ ಸರಿಪಡಿಸದಿದ್ದರೆ ಹೋರಾಟ ಕಾಗಿನೆಲೆ ಗುರುಪೀಠದ ಸ್ವಾಮೀಜಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಹರ: ‘ಪಠ್ಯ–ಪುಸ್ತಕಗಳಲ್ಲಿ ಬಸವಣ್ಣ, ಕನಕದಾಸ, ಕುವೆಂಪು ಅವರಂತಹ ಮಹನೀಯರ ಪರಿಚಯದ ಪಾಠಗಳಲ್ಲಿ ಆಗಿರುವ ಲೋಪ ಸರಿಪಡಿಸದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಶನಿವಾರ ಎಚ್ಚರಿಕೆ ನೀಡಿದರು. 

ಪತ್ರಿಕಾಗೋಷ್ಠಿಯಲ್ಲಿ ಅವರು, ‘ಮಹನೀಯರ ಪರಿಚಯ ಸತ್ಯದಿಂದ ಕೂಡಿರಬೇಕು. ಮಕ್ಕಳಿಗೆ ಇಲ್ಲಸಲ್ಲದ್ದು ಕಲಿಸಬಾರದು. ಆಗಿರುವ ಲೋಪವನ್ನು ಶೀಘ್ರ ಸರಿಪಡಿಸಲು ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಆಗ್ರಹಿಸುತ್ತೇನೆ. ತಪ್ಪಿದಲ್ಲಿ ಎಲ್ಲರ ಜೊತೆಗೂಡಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಸರ್ಕಾರ ಕಷ್ಟ ಎದುರಿಸಬೇಕಾಗುತ್ತದೆ’ ಎಂದರು.

ತಿಂಗಳಲ್ಲಿ ಸಂಶೋಧನಾ ಕೇಂದ್ರದ ವರದಿ: ‘ಹಿಂದುಳಿದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬೇಡಿಕೆ ಕುರಿತಂತೆ ಬುಡಕಟ್ಟು ಸಂಶೋಧನಾ ಕೇಂದ್ರದಿಂದ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗಿದೆ. ವರದಿ ಬಂದ ನಂತರ ಕೇಂದ್ರ ಸರ್ಕಾರಕ್ಕೆ ಅದನ್ನು ರವಾನಿಸಬೇಕಿದೆ. ಈ ದಿಸೆಯಲ್ಲಿ ಪ್ರಯತ್ನ ನಡೆದಿದೆ. ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಬೇಕು’ ಎಂದು ಸ್ವಾಮೀಜಿ ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು