ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ದೂರದೃಷ್ಟಿ ಕೊರತೆಯಿಂದ ರೈತರಿಗೆ ಸಂಕಷ್ಟ: ತೇಜಸ್ವಿ ಪಟೇಲ್

Published 11 ಫೆಬ್ರುವರಿ 2024, 7:30 IST
Last Updated 11 ಫೆಬ್ರುವರಿ 2024, 7:30 IST
ಅಕ್ಷರ ಗಾತ್ರ

ತ್ಯಾವಣಿಗೆ: ನೀರಾವರಿ ಸಲಹಾ ಸಮಿತಿಯ (ಐಸಿಸಿ) ದೂರದೃಷ್ಟಿ ಕೊರತೆ ಹಾಗೂ ತೀರ್ಮಾನದಿಂದ ರೈತರು ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ತೇಜಸ್ವಿ ಪಟೇಲ್ ಆರೋಪಿಸಿದರು. 

ತ್ಯಾವಣಿಗೆ ಸಮೀಪದ ಕುಕ್ಕವಾಡ ಗ್ರಾಮದ ಕಬ್ಬು ಬೆಳೆಗಾರರ ಸಂಘದಲ್ಲಿ ನಡೆದ ಕಬ್ಬು ಬೆಳೆಗಾರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಒತ್ತಡಕ್ಕೆ ಮಣಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವ ನೀರಾವರಿ ಎಂಜಿನಿಯರ್‌ಗಳ ಬೇಜವಾಬ್ದಾರಿತನ ಇಂದಿನ ಪರಿಸ್ಥಿತಿಗೆ ಮುಖ್ಯ ಕಾರಣ. ಬಿಸಿಲಿನ ತಾಪ ಹೆಚ್ಚುತ್ತಿದ್ದು, ಅನೇಕ ಕಡೆ ನೀರಿಲ್ಲದೆ ಕಬ್ಬು ಒಣಗುತ್ತಿದೆ. ನಾಟಿ ಮಾಡಿಕೊಂಡು ಅನೇಕರು ನೀರಿಗೆ ಪ್ರಯತ್ನಿಸುತ್ತಿದ್ದಾರೆ. ಎಲ್ಲ ಪರಿಸ್ಥಿತಿಯನ್ನು ಜಿಲ್ಲಾಡಳಿತ ಗಮನಿಸಿ, ಬೆಳೆಗಳನ್ನು ಉಳಿಸಲು ಮುಂದಾಗಬೇಕು’ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ಬಳಿ ನಿಯೋಗ ತೆರಳಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ ಎಂದು ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಮಲ್ಲೇಶಪ್ಪ ಹೇಳಿದರು.

ಕಬ್ಬು ಬೆಳೆಗಾರ ಸಂಘ ಮತ್ತು ಕಾರ್ಖಾನೆ ಎರಡರ ಹಿತವನ್ನು ಕಾಪಾಡುವತ್ತ ಸಂಘ ಕಾರ್ಯ ನಿರ್ವಹಿಸಬೇಕು ಎಂದು ವಕೀಲ ಹನುಮಂತಪ್ಪ ಹೇಳಿದರು.

ಸಂಘದ ಉಪಾಧ್ಯಕ್ಷ ದಿಲ್ಡಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಶಂಕರ್, ಷಣ್ಮುಖ ಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT