ಶುಕ್ರವಾರ, ಮಾರ್ಚ್ 5, 2021
30 °C
ಮೀಸಲಾತಿ ಪಾದಯಾತ್ರೆ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಎಚ್.ಎಸ್.ನಾಗರಾಜ್

ಮೀಸಲಾತಿ ಹೋರಾಟದಲ್ಲಿ ಪಂಚಮಸಾಲಿ ಸ್ವಾಮೀಜಿಗಳ ಸಂಗಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶಕ್ಕೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸಲು ಸ್ವಾಗತ ಸಮಿತಿ ನಿರ್ಧರಿಸಿದೆ. 

‘ಕೂಡಲಸಂಗಮ ಪೀಠ ಹಾಗೂ ಹರಿಹರ ಪೀಠಗಳು ರಾಜ್ಯದ ಮಧ್ಯನಗರಿಯಲ್ಲಿ ಸಂಗಮವಾಗಬೇಕು ಎಂಬ ದೃಷ್ಟಿಯಿಂದ ಜ. 29ರಂದು ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಎರಡೂ  ಪೀಠಗಳ ಸ್ವಾಮೀಜಿಗಳನ್ನು ಕರೆತರಬೇಕು ಎಂದು ನಿರ್ಧರಿಸಿದ್ದೇವೆ. ಹರಿಹರದ ಪಂಚಮಸಾಲಿ ಪೀಠದ ಸಮಿತಿ ಸಮ್ಮತಿಸಿದೆ. ಭಾನುವಾರ ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸುತ್ತೇವೆ’ ಎಂದು ಪಾದಯಾತ್ರೆ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಎಚ್.ಎಸ್.ನಾಗರಾಜ್ ಶನಿವಾರ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.