ಭಾನುವಾರ, ಆಗಸ್ಟ್ 1, 2021
27 °C

ಗೊಬ್ಬರ ಅಭಾವ ಸೃಷ್ಟಿಸಿ ದುಪ್ಪಟ್ಟು ಬೆಲೆ: ಕಿಸಾನ್‌ ಕಾಂಗ್ರೆಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಬರಗಾಲ ಪೀಡಿತ ಎಂದು ಕರೆಯಲಾಗುವ ಜಗಳೂರು ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ರೈತರು ಬಿತ್ತನೆ ಆರಂಭಿಸಿದ್ದಾರೆ. ಆದರೆ ಗೊಬ್ಬರದ ಅಂಗಡಿಗಳು ಕೃತಕವಾಗಿ ಗೊಬ್ಬರದ ಅಭಾವ ಸೃಷ್ಟಿಸಿ ಬೆಲೆ ದುಪ್ಪಟ್ಟುಗೊಳಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕಿಸಾನ್ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಆರೋಪಿಸಿದರು.

ಜಗಳೂರಿನಲ್ಲಿ ನಡೆದ ತಾಲ್ಲೂಕು ಕಿಸಾನ್ ಕಾಂಗ್ರೆಸ್ ಸಭೆಯಲ್ಲಿ ಅವರು ಮಾತನಾಡಿದರು.

ದುಪ್ಪಟ್ಟು ಬೆಲೆಗೆ ಗೊಬ್ಬರ ಮಾರಾಟ ಮಾಡುವ ಅಂಗಡಿಗಳಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಚನ್ನಬಸಪ್ಪ, ರೋಹಿತ್, ಸಂಕಟಪ್ಪ, ಪ್ರವೀಣ್, ನೀಲಪ್ಪ ಮತ್ತು ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು