ಮಂಗಳವಾರ, ಅಕ್ಟೋಬರ್ 26, 2021
20 °C

ವಿದ್ಯುತ್ ತಗುಲಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಮೂತ್ರ ವಿಸರ್ಜನೆಗೆಂದು ಹೋದ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ಯುವಕ ಭಾನುವಾರ ಮೃತಪಟ್ಟಿದ್ದಾರೆ.

ಭಾರತ್ ಕಾಲೊನಿಯ ಮನೋಜ್‌ ಮಜ್ಜಿಗೆ (21) ಮೃತಪಟ್ಟವರು. ತುಂತುರು ಮಳೆ ಬರುತ್ತಿದ್ದಾಗ ಯಲ್ಲಮ್ಮನಗರ ಕುಂದವಾಡ ರಸ್ತೆಯಲ್ಲಿ ವಿದ್ಯುತ್‌ ಕಂಬದಿಂದ ವಿದ್ಯುತ್‌ ಗ್ರೌಂಡ್‌ ಆಗಿದ್ದರಿಂದ ಈ ದುರ್ಘಟನೆ ಉಂಟಾಗಿದೆ. ಪೊಲೀಸರು ಕೂಡಲೇ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದರು.

ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇಡಲಾಗಿದೆ. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು