ಗುರುವಾರ , ಅಕ್ಟೋಬರ್ 21, 2021
21 °C
ನಗರದೇವತೆ ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ ಸಭೆಯಲ್ಲಿ ಶಾಮನೂರು ಹೇಳಿಕೆ

ನವರಾತ್ರಿ ಸಂಭ್ರಮದಿಂದ ಆಚರಿಸಲು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಟ್ರಸ್ಟ್‌ ಗೌರವಾಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ನಗರದೇವತೆ ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನದ ಪ್ರಸಾದ ನಿಲಯದಲ್ಲಿ ಭಾನುವಾರ ನಡೆದ ದೇವಸ್ಥಾನದ ಟ್ರಸ್ಟ್‌ ಸರ್ವ ಸದಸ್ಯರ ಸಭೆಯಲ್ಲೀ ಈ ಚರ್ಚೆ ನಡೆದ ಬಳಿಕ ಶಾಮನೂರು ಶಿವಶಂಕರಪ್ಪ ಮಾತನಾಡಿದರು.

ಕೋವಿಡ್ ಮಾರ್ಗಸೂಚಿಯನ್ವದಂತೆ ಉತ್ಸವ ನಡೆಯಲಿದೆ. ದೇವಸ್ಥಾನದ ವತಿಯಿಂದ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ನಿರ್ಮಾಣದ ವೆಚ್ಚ ಹೆಚ್ಚಳವಾಗಿದೆ ಎಂಬ ಅನುಮಾನ ಬಂದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಲೆಕ್ಕ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

ಟ್ರಸ್ಟ್‌ ಸದಸ್ಯರಾದ ಯಜಮಾನ್ ಮೋತಿವೀರಣ್ಣ, ಜೋಗಪ್ಪನವರ ಕೊಟ್ರಬಸಪ್ಪ, ಹನುಮಂತರಾವ್ ಸಾವಂತ್, ಗೌಡ್ರು ಚನ್ನಬಸಪ್ಪ, ಎಚ್.ಬಿ. ಗೋಣೆಪ್ಪ, ಸಾಳಂಕಿ ಉಮೇಶ್, ಬಿ.ಕೆ.ರಾಮಕೃಷ್ಣ, ಸೊಪ್ಪಿನವರ ಗುರುರಾಜ್, ಹನುಮಂತರಾವ್ ಜಾಧವ್, ಮುಖಂಡರಾದ ಮಹಾನಗರ ಪಾಲಿಕೆ ಸದಸ್ಯ ಜಿ.ಡಿ. ಪ್ರಕಾಶ್, ಯಶವಂತರಾವ್ ಜಾಧವ್, ಕರಿಗಾರ ಬಸಪ್ಪ, ಬಳ್ಳಾರಿ ಷಣ್ಮುಖಪ್ಪ, ಪಿ.ಜೆ.ನಾಗರಾಜ್, ರಾಜನಹಳ್ಳಿ ಶಿವಕುಮಾರ್, ಕವಿರಾಜ್ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು