ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಅಂಗವಿಕಲರ ಒತ್ತಾಯ

Last Updated 10 ಸೆಪ್ಟೆಂಬರ್ 2020, 16:46 IST
ಅಕ್ಷರ ಗಾತ್ರ

ದಾವಣಗೆರೆ:ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಂಗವಿಕಲರ ಯೋಜನೆಗಳ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿರುವ ಅಧಿಸೂಚನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ 6,022 ಗ್ರಾಮ ಪಂಚಾಯಿತಿಗಳ ಪೈಕಿ 4,906 ಜನ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅಂಗವಿಕಲರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ (ವಿ.ಆರ್.ಡಬ್ಲ್ಯೂ) ನೇಮಕ ಮಾಡಲಾಗಿದೆ.169 ತಾಲ್ಲೂಕು ಪಂಚಾಯಿತಿಗಳಿಗೆ ಪದವೀಧರ ಅಂಗವಿಕಲರನ್ನು ಎಂ.ಆರ್.ಡಬ್ಲ್ಯೂ ಆಗಿ ನೇಮಿಸಿದ್ದು, 75 ಪಟ್ಟಣ, ನಗರ ಪುನರ್ವಸತಿ ಕಾರ್ಯಕರ್ತರು (ಯು.ಆರ್.ಡಬ್ಲ್ಯೂ) ನೇಮಿಸಿದ್ದು, 13 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಗ್ರಾಮೀಣ ವಿವಿಧೋದ್ದೇಶ ನಗರ ಪುನರ್ವಸತಿ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೊಳಿಸಿ ಎಂ.ಆರ್.ಡಬ್ಲ್ಯೂಗಳನ್ನು ತಾಲ್ಲೂಕು ಅಂಗವಿಕಲರ ಅಧಿಕಾರಿಯನ್ನಾಗಿ, ವಿ.ಆರ್.ಡಬ್ಲ್ಯೂಗಳನ್ನು ಗ್ರಾಮ ಮಟ್ಟದ ಅಭಿವೃದ್ಧಿ ಸಹಾಯಕರನ್ನಾಗಿ, ಯು.ಆರ್.ಡಬ್ಲ್ಯೂಗಳನ್ನು ನಗರ ಅಂಗವಿಕಲರ ಅಭಿವೃದ್ಧಿ ಸಹಾಯಕರನ್ನಾಗಿ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯಗಳನ್ನು ಎಂ.ಆರ್.ಡಬ್ಲ್ಯೂ, ವಿಆರ್‌ಡಬ್ಲ್ಯೂ ಹಾಗೂ ಯುಆರ್‌ಡಬ್ಲ್ಯೂರವರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯಂ, ಮುಖಂಡರಾದ ನಿಂಗಪ್ಪ, ಚನ್ನಪ್ಪ, ಯೋಗರಾಜ್, ಗಂಗಾಧರ, ಶೈಲಜಾ, ಶಿವನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT