ದಾವಣಗೆರೆ: ಬಿಜೆಪಿಯವರೆಲ್ಲಾ ಒಗ್ಗಟ್ಟಾಗಿದ್ದು, ಕಾರ್ಯಕರ್ತರ ಪಡೆ ಗಟ್ಟಿಯಾಗಿದೆ. ಡಿ.ಕೆ.ಶಿವಕುಮಾರ್ ಅವರ ರಿವರ್ಸ್ ಆಪರೇಷನ್ ನಡೆಯಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಸರ್ಕಾರ ಅಡ್ಡಿಯಾಗಿಲ್ಲ. ಅದ್ದೂರಿ ಕಾರ್ಯಕ್ರಮ ಬಿಟ್ಟು ಸರಳವಾಗಿ ಮಾಡಲಿ ಯಾರು ಬೇಡ ಅನ್ನಲ್ಲ. ನಿಯಮಾನುಸಾರ ಮಾಡಿಕೊಳ್ಳಲಿ ಯಾರು ಬೇಡ ಎನ್ನುತ್ತಾರೆ’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತೇನೆ ಆಗುತ್ತೇನೆ ಎಂದು ಪೈಲ್ವಾನ್ ರೀತಿ ಎದೆಯುಬ್ಬಿಸಿ ಭ್ರಮಲೋಕದಲ್ಲಿ ತೇಲುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಈ ಹಿಂದೆ ಸಿದ್ದರಾಮಯ್ಯ ತುಘಲಕ್ ದರ್ಬಾರ್ ಮಾಡಿದ್ರು, ಆದರೆ ನಾವು ಆ ರೀತಿ ಮಾಡಲ್ಲ. ಪದಗ್ರಹಣಕ್ಕೆ ಅಡ್ಡಿಯಾಗಿಲ್ಲ. ಮೊಸರಲ್ಲಿ ಕಲ್ಲು ಹುಡುಕುವುದನ್ನು ಕಾಂಗ್ರೆಸ್ ಬಿಡಬೇಕು’ ಎಂದರು.

ಸೂಪರ್ ಸಿಎಂ ವಿಜಯೇಂದ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.. ಸರ್ಕಾರದಲ್ಲಿ ಇದುವರೆಗೂ ಹಸ್ತಕ್ಷೇಪ ಮಾಡಿಲ್ಲ. ನಮ್ಮಲ್ಲಿ ಎರಡು ಪವರ್ ಸೆಂಟರ್ ಇಲ್ಲ, ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದು, ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಯತೀಂದ್ರ ಅವರು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲವೇ’ ಎಂದು ಪ್ರಶ್ನಿಸಿದರು.

‘ಸರ್ಕಾರದಲ್ಲಿ ಭಿನ್ನಮತ ಇಲ್ಲ, ಬಿ.ಎಸ್.ಯಡಿಯೂರಪ್ಪ ಅವರು ಮಾಸ್ ಲೀಡರ್, ಪ್ರಶ್ನಾತೀತ ನಾಯಕರು. 3 ವರ್ಷ ಅಧಿಕಾರ ಪೂರೈಸುತ್ತಾರೆ. ಯತ್ನಾಳ್ ಆ ರೀತಿ ಹೇಳಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.