ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನ ಗಾಜು ಒಡೆದು ₹6 ಲಕ್ಷ ದೋಚಿ ಪರಾರಿ

Last Updated 19 ಸೆಪ್ಟೆಂಬರ್ 2020, 14:08 IST
ಅಕ್ಷರ ಗಾತ್ರ

ದಾವಣಗೆರೆ:ಹಾಡುಹಗಲೇ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದ ಕಳ್ಳರು ಅದರಲ್ಲಿ ಇದ್ದ ₹6 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ.

ನಗರದ ತೊಗಟವೀರ ಕಲ್ಯಾಣ ಮಂಟಪದ ಬಳಿ ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಪ್ರಕಾಶ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಪ್ರಕಾಶ್ ಅವರು ಕಾರು ನಿಲ್ಲಿಸಿ ಅಂಗಡಿಗೆ ಹೋಗಿ ವಸ್ತುಗಳನ್ನು ಖರೀದಿಸಿ ಬರುವಷ್ಟರಲ್ಲಿ ಕಳ್ಳರು ಹಣ ಕದ್ದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT