ದಾವಣಗೆರೆ: ‘ನಿರುದ್ಯೋಗಿಗಳು ವಿದೇಶದಲ್ಲಿ ಉದ್ಯೋಗ ಪಡೆಯಲು ಅಂತರರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರ ಸಹಕಾರಿ’ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳ ಸಹಯೋಗದೊಂದಿಗೆ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಉದ್ಯೋಗಾವಕಾಶಗಳ ಕುರಿತು ಸಂವಾದ ಅರಿವು ಮತ್ತು ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದೇಶದಲ್ಲಿ ಉದ್ಯೋಗ ಮಾಡುವುದು ಇಂದಿನ ಯುವಜನತೆಯ ಕನಸಾಗಿದೆ. ಆದರೆ ಉದ್ಯೋಗವನ್ನರಸಿ ಹೋದವರು ಹಲವು ತೊಂದರೆಗೆ ಒಳಗಾಗಿದ್ದಾರೆ. ಸುರಕ್ಷಿತವಾದ ಉದ್ಯೋಗ ಪಡೆಯಲು ಸರ್ಕಾರ ನೂತನವಾಗಿ ಅಂತರ ರಾಷ್ಟ್ರೀಯ ವಲಸೆ ಕೇಂದ್ರವನ್ನು ಸ್ಥಾಪಿಸಿದೆ. ಮಧ್ಯವರ್ತಿಗಳ ಹಾವಳಿಯಿಂದ ಜನರನ್ನು ತಪ್ಪಿಸುವ ಸರ್ಕಾರದ ಯೋಜನೆ ಇದಾಗಿದೆ’ ಎಂದು ಹೇಳಿದರು.

ಅಂತರ ರಾಷ್ಟ್ರೀಯ ವಲಸೆ ಕೇಂದ್ರದ ವ್ಯವಸ್ಥಾಪಕಿ ಸಂಗೀತಾ ಇ. ನಿಕ್ಕಮ್ ಮಾತಾನಾಡಿ, ‘ರಾಜ್ಯದ ವಲಸಿಗರು ವಿದೇಶದಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಸಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಿದೆ. ಮ್ಯಾನೇಜ್ಮೆಂಟ್ ಇನ್ಫರ್ಮೇ಼ಷನ್ ಸಿಸ್ಟಂನಲ್ಲಿ ವಲಸೆ ಕಾರ್ಮಿಕರ ನೋಂದಣಿ ಮಾಡಲಾಗುತ್ತದೆ. ವಿದೇಶಕ್ಕೆ ಪ್ರಯಾಣ ಬೆಳೆಸುವವರಿಗೆ ಮಂಡಳಿಯಿಂದ 8 ಗಂಟೆಗಳ ಕಾಲ ಪೂರ್ವ ನಿರ್ಗಮನ ತರಬೇತಿ ನೀಡಲಾಗುತ್ತದೆ. ಕಿರುಕುಳಕ್ಕೆ ಒಳಗಾದ ಉದ್ಯೋಗಿಗಳು MADAD ಹಾಗೂ e-Migrate ಪೋರ್ಟಲ್‌ಗಳ ಸಹಾಯದಿಂದ ಕುಂದು–ಕೊರತೆಗಳನ್ನು ನಿವಾರಿಸಿಕೊಳ್ಳಬಹುದು’ ಎಂದರು.

ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ವೀಣಾ ಎಸ್.ಆರ್, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಕ್ಷೇತ್ರ ಕಾರ್ಯ ನಿರ್ವಾಹಕ ಚೇತನ್ ಕುಮಾರ ಎನ್. ಹಾಗೂ ಪ್ರಕಾಶ್ ಕೆ.ಎನ್. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.