ಗುರುವಾರ , ಜನವರಿ 21, 2021
30 °C

ದಾವಣಗೆರೆಯಲ್ಲಿ ಶಾಂತಿಯುತ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಕರೆಯಂತೆ ದಾವಣಗೆರೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು.

ನಗರದ ಜಯದೇವ ಸರ್ಕಲ್‌ಗೆ ಬಂದ್ ಕರೆ ಸೀಮಿತವಾಯಿತು.ಜನ ಜೀವನ ಎಂದಿನಂತ ಇತ್ತು . ಬಸ್, ಆಟೋ ಸಂಚಾರ ಎಂದಿನಂತೆ ಇದ್ದವು. ಅಂಗಡಿಗಳು ತೆರೆದಿದ್ದವು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಲಾಯಿತು.

ಉರುಳು ಸೇವೆ ಮಾಡಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಜಾತಿಯ ಜನರ ಓಲೈಕೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಮಾನವ ಸರಪಳಿ ನಿರ್ಮಿಸಿ  ಸ್ವಲ್ಪ ಹೊತ್ತು ರಸ್ತೆ ತಡೆ ಮಾಡಿದರು. ಮಹಿಳಾ ಕಾರ್ಯಕರ್ತೆಯರು ಯತ್ನಾಳ್ ಭಾವಚಿತ್ರಕ್ಕೆ ಸಗಣಿ ಎರಚಿ ಚಪ್ಪಲಿ ಸೇವೆ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು