ಗುರುವಾರ , ನವೆಂಬರ್ 26, 2020
20 °C

ಸಾವಿರಕ್ಕಿಂತ ಕೆಳಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಆಗಸ್ಟ್‌ನಲ್ಲಿ ಸಾವಿರ ದಾಟಿ ಹೋಗಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗಿ ಮೂರು ಸಾವಿರ ದಾಟಿತ್ತು. ಬಳಿಕ ಇದೇ ಮೊದಲ ಬಾರಿಗೆ ಸಾವಿರದ ಒಳಗೆ ಇಳಿದಿದೆ.

ಜಿಲ್ಲೆಯಲ್ಲಿ 58 ಮಂದಿಗೆ ಕೊರೊನಾ ಇರುವುದು ಗುರುವಾರ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 314 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಹರಿಹರ ತಾಲ್ಲೂಕು ಜಿಗಳಿಯ 70 ವರ್ಷದ ವೃದ್ಧೆ ತೀವ್ರ ಉಸಿರಾಟದ ಸಮಸ್ಯೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ನಿಧನರಾದರು.

ದಾವಣಗೆರೆ ತಾಲ್ಲೂಕಿನಲ್ಲಿ 21, ಹರಿಹರ ತಾಲ್ಲೂಕಿನಲ್ಲಿ 14, ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 12, ಚನ್ನಗಿರಿ ತಾಲ್ಲೂಕಿನಲ್ಲಿ 9 ಹಾಗೂ ಜಗಳೂರು ತಾಲ್ಲೂಕಿನಲ್ಲಿ 2 ಮಂದಿಗೆ ಕೊರೊನಾ ಇರುವುದು ಖಚಿತವಾಗಿದೆ.

ಇಲ್ಲಿಯವರೆಗೆ 19,936 ಮಂದಿಗೆ ಕೊರೊನಾ ಬಂದಿದೆ. 18,720 ಮಂದಿ ಗುಣಮುಖರಾಗಿದ್ದಾರೆ. 253 ಮಂದಿ ಮೃತಪಟ್ಟಿದ್ದಾರೆ. 963 ಸಕ್ರಿಯ ಪ್ರಕರಣಗಳಿವೆ.

ಗುಣಮುಖರಾಗುವವರ ಪ್ರಮಾಣ ಶೇ 91ಕ್ಕೆ ಏರಿದೆ. 36 ಮೊಬೈಲ್ ತಂಡಗಳು ಹಾಗೂ ಪ್ರತಿ ಆರೋಗ್ಯ ಸಂಸ್ಥೆಗಳಲ್ಲಿ ಸ್ಥಳೀಯ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಕಿಟ್ ಗಳ ಲಭ್ಯತೆ ಅನುಸಾರವಾಗಿ ಜಿಲ್ಲೆಯಲ್ಲಿ ಬಹುತೇಕ ಗುರಿ ಸಾಧಿಸಲಾಗುತ್ತಿದೆ. ಕೋವಿಡ್ ಪರೀಕ್ಷೆಗಳ ಮತ್ತು ಪ್ರಯೋಗಶಾಲೆಗಳ ಚಟುವಟಿಕೆಯನ್ನು ಖುದ್ದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರಗತಿ ಪರಿಶೀಲನೆ ಮಾಡುತ್ತಿದ್ದಾರೆ. ಹಾಗಾಗಿ ಪರೀಕ್ಷೆಗಳು ಜಾಸ್ತಿಯಾಗುತ್ತಿದ್ದು, ಕೊರೊನಾ ಪಾಸಿಟಿವ್‌ ಸಂಖ್ಯೆ ಕಡಿಮೆಯಾಗುತ್ತಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸದೇ ಇದ್ದರೆ ಮತ್ತೆ ಹೆಚ್ಚಾಗುವ ಅಪಾಯ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.ಡಿ. ರಾಘವನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.