ದಾವಣಗೆರೆ: ‘ಯಡಿಯೂರಪ್ಪ ರಾಜೀನಾಮೆಯಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನುವುದು ತಪ್ಪು. ಲಿಂಗಾಯತ ಮತಗಳು ಬದಲಾವಣೆಯಾಗುವುದಿಲ್ಲ. ಬಿಜೆಪಿ ಅಂದರೆ ಲಿಂಗಾಯತರ ಪಕ್ಷ ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಹೇಳಿದರು.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಈ ಹಿಂದೆ ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಬಿಜೆಪಿಯಿಂದ 40 ಜನ ಗೆದ್ದರು. ಕೆಜೆಪಿ 6 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಹಿಂದೆ ಹೈಕಮಾಂಡ್‌ಗೆ ಕೊಟ್ಟ ಮಾತಿನಂತೆ ಅವರು ಈಗ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠ ನಿರ್ಧಾರಕ್ಕೆ ಬೆಲೆ ಕೊಟ್ಟು ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಶಿಸ್ತಿನ ಪಕ್ಷ ಎಂಬುದನ್ನು ತೋರಿಸಿಕೊಟ್ಟಿದ್ದಾರೆ’ ಎಂದರು.

‘ನಾನೂ ಹಿರಿಯ. 5 ಬಾರಿ ಗೆದ್ದಿದ್ದೇನೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.