ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳವು ಆರೋಪಿಯಿಂದ ₹ 3.46 ಲಕ್ಷ ಮೌಲ್ಯದ ಚಿನ್ನಾಭರಣ ವಶ

Last Updated 23 ಫೆಬ್ರುವರಿ 2021, 16:27 IST
ಅಕ್ಷರ ಗಾತ್ರ

ದಾವಣಗೆರೆ: ಬೆಂಗಳೂರಿನಲ್ಲಿ ಕಳವು ಮಾಡುವಾಗ ಅಲ್ಲಿನ ರೈಲ್ವೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಕೆಟಿಜೆ ನಗರ ಪೊಲೀಸರು ವಿಚಾರಣೆ ನಡೆಸಿ ಆತನಿಂದ ₹ 3.46 ಲಕ್ಷ ಮೌಲ್ಯದ 77 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿಯ ಹನುಮಂತ (22) ಕಳವು ಆರೋಪಿ.

ಕೆಟಿಜೆ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜ.25ರಂದು ಬಸವರಾಜ ಹೆದ್‌ ಜಿ.ಎಂ. ಅವರ ಮನೆಯ ಕಿಟಕಿ ಮೂಲಕ ಕೈ ಹಾಕಿ ಬಸವರಾಜ ಅವರ ತಾಯಿಯ ಕೊರಳಲ್ಲಿದ್ದ ಮಾಂಗಲ್ಯ ಸರ ಮತ್ತು ಅಲ್ಲಿದ್ದ ಮೊಬೈಲ್‌ ಕಳವು ಮಾಡಲಾಗಿತ್ತು.

ಈ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್ಪಿ ಎಂ. ರಾಜೀವ್, ಡಿವೈಎಸ್‌ಪಿ ನಾಗೇಶ ಯು. ಐತಾಳ ಮತ್ತು ಕೇಂದ್ರ ವೃತ್ತ ನಿರೀಕ್ಷಕ ಗುರುಬಸವರಾಜ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಕೆಟಿಜೆ ನಗರ ಪೊಲೀಸ್ ಠಾಣೆಯ ಪಿಎಸ್ಐಗಳಾದ ಅಬ್ದುಲ್ ಖಾದರ್ ಜಿಲಾನಿ, ಆರ್. ವೀರೇಶ ಹಾಗೂ ಸಿಬ್ಬಂದಿ ಶಂಕರ್ ಜಾಧವ್, ಪ್ರಕಾಶ, ದಾದಾ ಖಲಂದರ್, ಮಂಜುನಾಥ, ಗಿರೀಶ, ರಾಘವೇಂದ್ರ ಇದ್ದ ತಂಡವು ತನಿಖೆ ನಡೆಸುತ್ತಿತ್ತು. ಮೊಬೈಲ್‌ ಐಎಂಇಐ ನಂಬರ್‌ನ ಡಿಸಿಆರ್ ಮಾಹಿತಿ ಆಧಾರದಲ್ಲಿ ಪತ್ತೆ ಕಾರ್ಯದಲ್ಲಿದ್ದಾಗ ಬೆಂಗಳೂರಿನ ರೈಲ್ವೆ ಪೊಲೀಸರು ಅಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು.

ಕೆಟಿಜೆ ನಗರ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೆಟಿಜೆ ನಗರದಲ್ಲಿ ಕಳವು 33 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಜತೆಗೆ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 43 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದನ್ನು ಕೂಡ ಆರೋಪಿ ಬಾಯಿ ಬಿಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT