ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾಳಿ: ಮೈದುಂಬಿ ಹರಿಯುತ್ತಿದೆ ತುಂಗಭದ್ರಾ ನದಿ 

Published 4 ಜುಲೈ 2024, 15:17 IST
Last Updated 4 ಜುಲೈ 2024, 15:17 IST
ಅಕ್ಷರ ಗಾತ್ರ

ಹೊನ್ನಾಳಿ: ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಇಲ್ಲಿ ಹರಿದು ಹೋಗಿರುವ ತುಂಗಭದ್ರಾ ನದಿ ಮೈದುಂಬಿದೆ.

ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಆರಿದ್ರಾ ಮಳೆ ರೈತರಿಗೆ ವರದಾನವಾಗಿದೆ. ತುಂಗಾ ಮತ್ತು ಭದ್ರಾ ಜಲಾಶಯಗಳಿಗೆ ನೀರು ಹರಿದುಬರುತ್ತಿದ್ದು, ಈ ಜಲಾಶಯಗಳನ್ನು ನಂಬಿ ಕೃಷಿ ಮಾಡುತ್ತಿರುವ ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ರೈತರು ಸಂತಸದಲ್ಲಿದ್ದಾರೆ.

ಕಳೆದ ವರ್ಷ ಮುಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಭತ್ತದ ಕೃಷಿ ಇಲ್ಲದೆ ರೈತರು ಕಂಗಲಾಗಿದ್ದರು. ಪ್ರಸಕ್ತ ಸಾಲಿನಲ್ಲಿ ಮುಂಗಾರು ಚೆನ್ನಾಗಿ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಅದರಂತೆ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT