ಮಂಗಳವಾರ, ಅಕ್ಟೋಬರ್ 27, 2020
20 °C

ಮನೆಯಲ್ಲಿ ಕಳವು: ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಶಿವನಗರ ಹಾಗೂ ರಜಾವುಲ್ ಮುಸ್ತಫಾ ನಗರದಲ್ಲಿ ನಡೆದಿದ್ದ ಎರಡು ಮನೆಗಳ್ಳತನಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಆಜಾದ್‌ನಗರ ಠಾಣೆ ಪೊಲೀಸರು ಬಂಧಿಸಿ ಅವರಿಂದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.

ಬಾಷಾನಗರದ ಇಬ್ರಾಹಿಂ ಖಲೀಲ್ ವುಲ್ಲಾ ಬಂಧಿತ. ಮತ್ತೊಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.  ಕಳ್ಳತನವಾಗಿದ್ದ ₹1.32 ಲಕ್ಷ ಮೌಲ್ಯದ 35 ಗ್ರಾಂ ಚಿನ್ನ, 20 ಗ್ರಾಂ ಬೆಳ್ಳಿ ಆಭರಣವನ್ನು ಹಾಗೂ ₹ 6 ಸಾವಿರ ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್ಪಿ ಹನುಮಂತರಾಯ ಆಜಾದ್‌ ನಗರ ಪಿಎಸ್ಐ ಕೆ.ಎನ್. ಶೈಲಜಾ ನೇತೃತ್ವದಲ್ಲಿ ತಂಡ ರಚಿಸಿದ್ದರು. ಎಎಸ್ಐ ಸುರೇಶ್, ಬಷೀರ್‌ ಅಹಮದ್, ಎಚ್.ಸಿ. ಮಂಜುನಾಥ ನಾಯ್ಕ, ಹನುಮಂತಪ್ಪ ಮಡ್ಡಿ, ರವಿನಾಯ್ಕ, ಪ್ರೊರಾನಾಯ್ಕ್ ಕಾರ್ಯಾಚರಣೆಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು