ಮಂಗಳವಾರ, ಸೆಪ್ಟೆಂಬರ್ 21, 2021
29 °C
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ

ಬಿಜೆಪಿಯಲ್ಲಿ ನಾಯಕತ್ವದ ಗೊಂದಲ ಇಲ್ಲ: ಬೈರತಿ ಬಸವರಾಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ಬಿಜೆಪಿಯಲ್ಲಿ ನಾಯಕತ್ವದ ಗೊಂದಲ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈಗಾಗಲೇ ಮುಂದಿನ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸ್ವಷ್ಟವಾಗಿ ಹೇಳಿದ್ದಾರೆ. ಅದಕ್ಕೆ ನಾವೆಲ್ಲರೂ ಬದ್ಧ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಅಂದ ಮಾತ್ರಕ್ಕೆ ನಾಯಕತ್ವ ಗೊಂದಲ ಇದೆ ಎನ್ನುವುದು ಸರಿಯಲ್ಲ. ಅಮಿತ್ ಶಾ ಯಡಿಯೂರಪ್ಪ ಅವರ ಬಗ್ಗೆ ಅಪಾರ ಗೌರವ ಇಟ್ಟುಕೊಂಡು ಮಾತಾಡಿದ್ದಾರೆ. ಯಡಿಯೂರಪ್ಪ, ಜಗದೀಶ ಶೆಟ್ಟರ್‌ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆ’ ಎಂದರು.

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪೇನಿಲ್ಲ. ಅವರು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ನಾಯಕ. ಅವರ ಪ್ರವಾಸದ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಯಡಿಯೂರಪ್ಪ, ವಿಜಯೇಂದ್ರ ಕುರಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿದ ಹೇಳಿಕೆ ಬಗ್ಗೆ ಗೊತ್ತಿಲ್ಲ’ ಎಂದು ಹೇಳಿದರು.

ಮೇಕೆದಾಟು–ರಾಜಿ ಇಲ್ಲ 

‘ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರದ ನಿಲುವಿನಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರ ಕೈಗೊಳ್ಳುತ್ತೇವೆ. ಮುಖ್ಯಮಂತ್ರಿ ಅವರು ಈ ಕುರಿತು ಕಾನೂನಾತ್ಮವಾಗಿ ಪರಿಹಾರ ಕಂಡುಕೊಳ್ಳಲಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಚುನಾವಣೆ ಸಂಬಂಧ ಕ್ಷೇತ್ರ ವಿಂಗಡಣೆ ತರಾತುರಿಯಲ್ಲಿ ಆಗಿತ್ತು. ಮತ್ತೊಮ್ಮೆ ಅದನ್ನು ಅಧಿಕಾರಿಗಳ ಸಮ್ಮುಖದಲ್ಲಿ ಮರುಪರಿಶೀಲನೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು