ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶದಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ’

Last Updated 11 ಡಿಸೆಂಬರ್ 2020, 5:12 IST
ಅಕ್ಷರ ಗಾತ್ರ

ದಾವಣಗೆರೆ: ‘ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ.ಕಾಂಗ್ರೆಸ್ ಜೊತೆ ಹೋದ ಪ್ರಾದೇಶಿಕ ಪಕ್ಷಗಳು ಅಸ್ತಿತ್ವ ಕಳೆದುಕೊಂಡಿವೆ.ದೇಶದಲ್ಲಿ ವಿರೋಧ ಪಕ್ಷಗಳು ಮೂಲೆಗುಂಪಾಗಿವೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಶಾಸಕರು ಹೊರ ಹೋಗುವಂತೆ ಕಾಂಗ್ರೆಸ್‌ನವರೇ ಮಾಡಿದರು. ಎಚ್‌.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಮೋಸ ಮಾಡಿದರು.ಈಗ ಅವರಿಗೆ ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಬಂದಿದೆ.ಕಾಂಗ್ರೆಸ್ ಸಹವಾಸ ಮಾಡಿ ಎಚ್‌ಡಿಕೆ ಈಗ ಕಣ್ಣೀರು ಹಾಕುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಲವ್ ಜಿಹಾದ್ ತಡೆಯಲು ಕಾನೂನು ತಂದೆ ತರುತ್ತೇವೆ.ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸುತ್ತೇವೆ.ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಕಲಿ ಹಿಂದೂಗಳು. ನಾವು ಹಿಂದುತ್ವದ ಪ್ರತಿಪಾದಕರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT