ಶನಿವಾರ, ಜೂನ್ 6, 2020
27 °C

ದಾವಣಗೆರೆಯಲ್ಲಿ ವೃದ್ಧೆ ಸೇರಿ ಮೂವರಿಗೆ ಕೋವಿಡ್‌-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ದಾವಣಗೆರೆ: ಜಿಲ್ಲೆಯಲ್ಲಿ ವೃದ್ಧೆ ಸೇರಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನು ಶನಿವಾರ ಬಂದ ವೈದ್ಯಕೀಯ ವರದಿ ಖಚಿತಪಡಿಸಿದೆ.

ಜಾಲಿನಗರದ 48 ವರ್ಷದ ಸೋಂಕಿತ ವ್ಯಕ್ತಿಯ (ಪಿ.1251) ಸಂಪರ್ಕದಿಂದ 42 ವರ್ಷದ ಪುರುಷ (ಪಿ.1808), 69 ವರ್ಷದ ವೃದ್ಧೆ (ಪಿ.1809) ಹಾಗೂ 45 ವರ್ಷದ ಪುರುಷನಿಗೆ (ಪಿ.1852) ಕೊರೊನಾ ಸೋಂಕು ತಗುಲಿದೆ. 

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣದ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 21 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್‌ನಿಂದ ನಾಲ್ವರು ಮೃತಪಟ್ಟಿದ್ದಾರೆ. 96 ಕೋವಿಡ್‌ ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು