ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ ಗುಡುಗು ಸಹಿತ ಬಿರುಸಿನ ಮಳೆಯಾಗಿದ್ದು, ಹಳ್ಳ ಹಾಗೂ ಕಾಲುವೆಗಳಿಗೆ ಜೀವಕಳೆ ಬಂದಿದೆ.
ನಸುಕಿನ 3.15ಕ್ಕೆ ಆರಂಭವಾದ ಮಳೆ ಸುಮಾರು ಒಂದು ಗಂಟೆ ಬಿರುಸಾಗಿ ಸರಿಯಿತು. ಸಿಡಿಲಿನ ಅಬ್ಬರ ಜೋರಾಗಿತ್ತು. ಚರಂಡಿಗಳಲ್ಲಿ ನೀರು ರಭಸವಾಗಿ ಹರಿಯಿತು. ಕರೆ, ಕಟ್ಟೆ, ಚೆಕ್ ಡ್ಯಾಂಗಳು ಸೇರಿ ಜಲಮೂಲಗಳಿಗೆ ನೀರು ಹರಿದುಬಂದಿದೆ.
ದಾವಣಗೆರೆ, ಚನ್ನಗಿರಿ, ಹರಿಹರ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಮಾಯಕೊಂಡ ಸುತ್ತ ಉತ್ತಮ ಮಳೆಯಾಗಿದ್ದು, ಜಮೀನುಗಳಲ್ಲಿ ನೀರು ಹರಿಯುತ್ತಿದೆ. ಮೆಕ್ಕೆಜೋಳ ಸೇರಿ ವಿವಿಧ ಬೆಳೆಗಳು ಅಲ್ಲಲ್ಲಿ ಜಲಾವೃತ ಆಗಿವೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.