ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಯ ಪ್ರಜ್ಞೆ ಅಗತ್ಯ: ಹೊರಟ್ಟಿ

Last Updated 13 ಫೆಬ್ರುವರಿ 2021, 15:38 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಿಕ್ಷಕರಲ್ಲಿ ಸಮಯ ಪ್ರಜ್ಞೆ ಮತ್ತು ಕಾರ್ಯತತ್ಪರತೆ ಮಕ್ಕಳಿಗೆ ತಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಪ್ರೇರಣೆಯಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದ ಆರ್‌ಎನ್‌ಎಸ್‌ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹುಬ್ಬಳ್ಳಿ ಶಹರ ವಲಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಆಯೋಜಿಸಿದ್ದ ಕೋರ್ ವಿಷಯಗಳ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ‘ಅನುತ್ತೀರ್ಣತೆ ಶಿಕ್ಷಕರ ಸಾಮರ್ಥ್ಯಕ್ಕೆ ಕನ್ನಡಿಯಾಗಿದ್ದು, ಶಿಕ್ಷಕರು ತಮ್ಮ ವೃತ್ತಿ ಗೌರವ ಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು’ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್. ಹಂಚಾಟೆ ಮಾತನಾಡಿ ‘ಶಿಕ್ಷಕರು ಕಲಿಕಾ ಪ್ರಕ್ರಿಯೆಯಲ್ಲಿ ಕಲಿಕೋಪಕರಣಗಳನ್ನು ಬಳಸಬೇಕು. ನೈಜ ಅನುಭವದ ಕಲಿಕೆಗೆ ಒತ್ತು ನೀಡಬೇಕು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ್ ಕರೀಕಟ್ಟಿ, ಉಪ ಯೋಜನಾಧಿಕಾರಿ ಎಸ್‌.ಎಂ. ಹುಡೇದಮನಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್‌. ಶಿವಳ್ಳಿಮಠ, ಡಯಟ್‌ನ ಉಪನ್ಯಾಸಕ ಜೆ.ಜಿ. ಸೈಯದ್, ರೇಣುಕಾ ಅಮುಲಝರಿ, ಸಂಜಯ ಮಾಳಿ, ಬಿ. ದುಬ್ಬನಮರಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT