ದಾವಣಗೆರೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ತಾಲ್ಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರ ಮೇಲೆ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ದಿವಂಗತ ಹನುಮಂತಪ್ಪ ಅವರ ಪತ್ನಿ ತಿಮ್ಮವ್ವ (62) ಮೃತಪಟ್ಟವರು. ಅಪಘಾತವಾದಾಗಎರಡೂ ಕಾಲುಗಳಿಗೆ ತೀವ್ರ ಪೆಟ್ಟುಬಿದ್ದಿದ್ದು, ಚಿಕಿತ್ಸೆಗಾಗಿ ಸಿ.ಜಿ. ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರಿಂದ ಕೆಲ ಹೊತ್ತು ರಸ್ತೆ ತಡೆ ನಡೆಸಿದರು. ಉತ್ತರ ಪ್ರದೇಶದ ಮೂಲದ ಟಿಪ್ಪರ್ ಚಾಲಕ ಅರವಿಂದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.