ಸಾಸ್ವೆಹಳ್ಳಿ: ಸಮೀಪದ ಚಿಕ್ಕಬಾಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತಿರುಗಣಿ ರಥೋತ್ಸವವು ಭಾನುವಾರ ಬೆಳಿಗ್ಗೆ ಅತ್ಯಂತ ವೈಭವದಿಂದ ಜರುಗಿತು.

ರಥೋತ್ಸವದಲ್ಲಿ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ನೂತನ ರಥಕ್ಕೆ ಗೋವಿನಕೋವಿ ಮಠದ ಶಿವಯೋಗಿ ಮಹಾಲಿಂಗ ಹಾಲಸ್ವಾಮೀಜಿ ಕಳಸಾರೋಹಣ ನೆರವೇರಿಸಿದರು. ನಂತರ ರಥದಲ್ಲಿ ಚಿಕ್ಕಬಾಸೂರು ಗ್ರಾಮದ ಬಸವೇಶ್ವರ ಮೂರ್ತಿ ಹಾಗೂ ಬೆನಕನಹಳ್ಳಿಯ ಬೆನಕೇಶ್ವರ ಸ್ವಾಮಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಭಕ್ತರು ಜಯಘೋಷಗಳೊಂದಿಗೆ ರಥವನ್ನು ಎಳೆದರು.

ಗ್ರಾಮದ ಮಾರಿಕಾಂಬಾ ದೇವಿ ಹಾಗೂ ಬೆನಕನಹಳ್ಳಿಯ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗಳು ರಥೋತ್ಸವದಲ್ಲಿ ಭಾಗವಹಿಸಿ ಮೆರಗು ನೀಡಿದವು.

ಭಕ್ತರು ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಮಂಡಕ್ಕಿ, ಮೆಣಸು ಹಾಗೂ ಬಾಳೆಹಣ್ಣನ್ನು ಎಸೆಯುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಕಾರ್ಯಕ್ರಮದ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.