ಭಾನುವಾರ, ಫೆಬ್ರವರಿ 23, 2020
19 °C

ಅಂಬೇಡ್ಕರ್‌ ಪರಿನಿರ್ವಾಣ ದಿನ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಎಸ್ಒಜಿ ಕಾಲೊನಿಯಲ್ಲಿ ಡಿ. 6ರಂದು ರಾತ್ರಿ 7ಕ್ಕೆ ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ (ಡಿಎಸ್‌–4) ಜಿಲ್ಲಾ ಘಟಕದ ಅಧ್ಯಕ್ಷ ಹೆಗ್ಗೆರೆ ರಂಗಪ್ಪ ಹೇಳಿದರು.

ಕರ್ನಾಟಕ ಮಾನವ ಹಕ್ಕುಗಳ ಹೋರಾಟ ಸಮಿತಿ, ಡಿಎಸ್‌–4, ಕರ್ನಾಟಕ ದಲಿತ ಸೇನಾ ಸಮಿತಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಕ್ಕೆ ಎಸ್‌ಒಜಿ ಕಾಲೊನಿಯ ಬಸ್‌ ನಿಲ್ದಾಣದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಗುವುದು. ಬಳಿಕ ವಿದ್ಯಾರ್ಥಿಗಳ ಪರೇಡ್‌ ನಡೆಯಲಿದೆ. ಕಾಲೊನಿಯ ಉದ್ಯಾನದಲ್ಲಿ ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆ ನಡೆಯಲಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ತಹಶೀಲ್ದಾರ್‌ ಸಂತೋಷ್‌ಕುಮಾರ್‌, ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ, ಪಾಲಿಕೆ ಸದಸ್ಯ ಪಾಮೇನಹಳ್ಳಿ ನಾಗರಾಜ್ ಭಾಗವಹಿಸುವರು. ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಟಿ. ಬಸವರಾಜು, ಬಿ. ಕಲ್ಲೇಶಪ್ಪ, ಕೆ.ಸಿ. ಮೂರ್ತಿ ಬೆಳ್ಳಿಗನೂಡು, ಕಾರಿಗನೂರು ನಾಗರಾಜ್, ಕೆ.ಎಂ. ವಾಗೀಶಯ್ಯ, ಅಶೋಕ್‌, ದೀಪಕ್‌ಕುಮಾರ್‌, ಷಡಕ್ಷರಪ್ಪ, ರಂಗಸ್ವಾಮಿ, ಲಿಂಗರಾಜ್‌ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು