ಪಟ್ಟಣ ಪಂಚಾಯಿತಿ ಚುನಾವಣೆ ಬ್ಯಾನರ್, ಫ್ಲೆಕ್ಸ್ ಸೂಚನೆ

7

ಪಟ್ಟಣ ಪಂಚಾಯಿತಿ ಚುನಾವಣೆ ಬ್ಯಾನರ್, ಫ್ಲೆಕ್ಸ್ ಸೂಚನೆ

Published:
Updated:
Deccan Herald

ಹೊನ್ನಾಳಿ: ಪಟ್ಟಣದ 18 ವಾರ್ಡ್‌ಗಳಿಗೆ ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಪಟ್ಟಣದಲ್ಲಿ ಹಾಕಿರುವ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಹಶೀಲ್ದಾರ್ ಡಾ. ನಾಗವೇಣಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,  ‘ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಟ್ಟಣದ ವ್ಯಾಪ್ತಿಗೆ ಬರುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವಂತಿಲ್ಲ. ಪ್ರವಾಸಿ ಮಂದಿರದಲ್ಲಿ ಯಾವುದೇ ಸಭೆ ಸಮಾರಂಭಗಳನ್ನು, ಸುದ್ದಿಗೋಷ್ಠಿಗಳನ್ನು ನಡೆಸುವಂತಿಲ್ಲ’ ಎಂದರು.

ಮತದಾರರ ಪಟ್ಟಿ ಸಿದ್ಧ: ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, 7,830 ಪುರುಷರು ಹಾಗೂ 8,010 ಮಹಿಳೆಯರು ಸೇರಿ ಒಟ್ಟು 15,840 ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ ಎಂದರು.

ಬಿಆರ್‌ಸಿ ಉಮಾಶಂಕರ್ ಹಾಗೂ ಉಪನ್ಯಾಸಕ ಪ್ರಕಾಶ್ ಅವರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಚುನಾವಣಾ ಕಚೇರಿಯನ್ನು ತೆರೆಯಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಚುನಾವಣಾ ಶಿರಸ್ತೆದಾರ್ ಪರಮೇಶ್ ನಾಯ್ಕ ಉಪಸ್ಥಿತರಿದ್ದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !