ಭಾನುವಾರ, ಜುಲೈ 25, 2021
22 °C
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ

ಕೊರೊನಾ ವಾರಿಯರ್ಸ್‌ಗೂ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೊರೊನಾ ವಾರಿಯರ್ಸ್‌ಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಹಾಗೂ ನರ್ಸ್‌ಗಳಿಗೂ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಂದರ್ಭ ನೀರು ಹಾಗೂ ಜ್ಯೂಸ್ ಕುಡಿಯುವ ಸಂದರ್ಭ ಸೋಂಕು ಹರಡಿರುವ ಸಾಧ್ಯತೆ ಇದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ. ಮಾಹಿತಿ ಕೊರತೆಯಿಂದ ರೋಗ ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪಿಪಿಇ ಕಿಟ್ ಧರಿಸುವ ಮತ್ತು ತೆಗೆದು ಹಾಕುವ ಬಗ್ಗೆ ತರಬೇತಿ ನೀಡಲಾಗುವುದು’ ಎಂದು ಹೇಳಿದರು.

‘ಸೋಂಕು ದೃಢಪಟ್ಟಿರುವ ವೈದ್ಯರು ಹಾಗೂ ನರ್ಸ್‌ಗಳನ್ನು ಐಸೋಲೇಷನ್ ವಾರ್ಡ್‌ನಲ್ಲಿ ಇಟ್ಟು ಚಿಕಿತ್ಸೆ ನೀಡುತ್ತಿದ್ದು, ಒಂದು ವಾರದಲ್ಲಿ ಗುಣಮುಖರನ್ನಾಗಿ ಮಾಡಿ, ನಂತರ ಅವರನ್ನು ಕರ್ತವ್ಯಕ್ಕೆ ಬಳಸಿಕೊಳ್ಳುತ್ತೇವೆ’ ಎಂದರು.

ದೇವಾಲಯಗಳಿಗೆ ಆರಂಭದ ಬಗ್ಗೆ ಉತ್ತರಿಸಿದ ಅವರು, ‘ಎಲ್ಲವನ್ನೂ ಪರಿಗಣಿಸಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್‌ ಬಳಸಿ ಮಾಸ್ಕ್ ಧರಿಸಿ ಬದುಕಬೇಕಾಗಿದೆ’ ಎಂದರು.

ಹೊರಗಡೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗುವುದು. ಅವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಹಿಸಲಾಗುವುದು. ಅದಕ್ಕಾಗಿಯೇ ಅದಕ್ಕಾಗಿಯೇ ಒಂದು ತಂಡ ಕೆಲಸ ಮಾಡುತ್ತಿದೆ. ಜಾಲಿನಗರದಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನಲ್ಲದೇ ರ‍್ಯಾಂಡಮ್‌ ಆಗಿ ಟೆಸ್ಟ್ ಮಾಡಿದ್ದೇವೆ. ಅದಕ್ಕಾಗಿಯೇ ಅಲ್ಲಿ 9 ತಂಡಗಳು ಕೆಲಸ ಮಾಡುತ್ತಿವೆ. ದುರ್ಬಲರು, ತೀವ್ರ ಉಸಿರಾಟದ ತೊಂದರೆ ಇರುವವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕೊರೊನಾ ಕೊಂಡಿ ತುಂಡರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು