ಅಲೆಮಾರಿ ಕುಟುಂಬಗಳ ಮೇಲೆ ಹಲ್ಲೆ

7

ಅಲೆಮಾರಿ ಕುಟುಂಬಗಳ ಮೇಲೆ ಹಲ್ಲೆ

Published:
Updated:

ದಾವಣಗೆರೆ: ತಾಲ್ಲೂಕಿನ ಹುಚ್ಚವ್ವನಹಳ್ಳಿ ಸಮೀಪದ ಎಚ್‌. ಬಸವಾಪುರದ ಗೋಮಾಳದಲ್ಲಿ ಗುಡಿಸಲು ಕಟ್ಟಿಕೊಂಡಿದ್ದ ಸುಡುಗಾಡು ಸಿದ್ಧ ಸಮುದಾಯದವರ ಮೇಲೆ ಗ್ರಾಮಸ್ಥರು ಬುಧವಾರ ರಾತ್ರಿ ಹಲ್ಲೆ ನಡೆಸಿದ್ದಾರೆ.

ಇಬ್ಬರು ಮಹಿಳೆಯರೂ ಒಳಗೊಂಡಂತೆ ಸೋಮ, ಗಂಗ, ಆರ್‌. ಮಂಜುನಾಥ ಮತ್ತು ಮಾರೆಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಾಯಕೊಂಡದ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಗೋಮಾಳದಲ್ಲಿ ಗುಡಿಸಿಲು ಕಟ್ಟಿಕೊಂಡಿರುವ ಸುಡುಗಾಡು ಸಿದ್ಧ ಜನಾಂಗದವರು ನಿವೇಶನ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಅಧಿಕಾರಿಗಳ ತಂಡ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !