ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಮಾಡಿದ ದಾವಣಗೆರೆ ಮಹಾನಗರ ಪಾಲಿಕೆ

Last Updated 30 ಏಪ್ರಿಲ್ 2021, 3:31 IST
ಅಕ್ಷರ ಗಾತ್ರ

ದಾವಣಗೆರೆ: ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಕೊರೊನ ವಾರಿಯರ್ಸ್ ಪೌರ ಕಾರ್ಮಿಕರಿಗೆ ಕೋವಿಡ್ 19ರ 2ನೇ ಅಲೆಯ ಲಾಕ್‍ಡೌನ್‍ನಿಂದ ಓಡಾಟಕ್ಕೆ ತೊಂದರೆ ಆಗಿತ್ತು. ಇದನ್ನು ಮನಗಂಡು ಪಾಲಿಕೆ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಡಿ. ಗೋಣೆಪ್ಪ ಅವರ ಸೂಚನೆಯಂತೆ ಪಾಲಿಕೆ ಆರೋಗ್ಯ ಅಧಿಕಾರಿ ಡಾ.ಸಂತೋಷ ಹಾಗೂ ಪರಿಸರ ಎಂಜಿನಿಯರ್‌ ಬಸಣ್ಣ, ಹಿರಿಯ ಆರೋಗ್ಯ ನಿರೀಕ್ಷಕ ಅಲ್ತ್‌ಮಾಷ್, ಎಲ್.ಎಚ್.ಸಂತೋಷ ಕುಮಾರ್ ತಂಡವು ಕಾರ್ಮಿಕರಿಗೆ ಬಸ್ಸು ವ್ಯವಸ್ಥೆ ಕಲ್ಪಿಸಿದೆ.

ಇಂತಹ ಪರಿಸ್ಥಿತಿಯಲ್ಲಿ ಉತ್ತಮವಾಗಿ ಸ್ವಚ್ಛತಾ ಕಾರ್ಯ ಮಾಡುವುದರ ಜತೆಗೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪೌರ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಂ. ಹನುಮಂತಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT