ರಸ್ತೆ ನಿರ್ಮಾಣಕ್ಕಾಗಿ ಮರಗಳ ಕಡಿತಲೆ

7

ರಸ್ತೆ ನಿರ್ಮಾಣಕ್ಕಾಗಿ ಮರಗಳ ಕಡಿತಲೆ

Published:
Updated:
Deccan Herald

ದಾವಣಗೆರೆ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಗರದ ಚಾಮರಾಜಪೇಟೆ ಮತ್ತು ಚೌಕಿಪೇಟೆಯಲ್ಲಿ ರಸ್ತೆ ನಿರ್ಮಾಣ ಮಾಡುವುದಕ್ಕಾಗಿ ಮರಗಳ ತೆರವು ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಗಿದೆ.

ರಸ್ತೆಯ ಎರಡೂ ಬದಿಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಹಾಗೂ ಅನುಪಯುಕ್ತ 50ಕ್ಕೂ ಹೆಚ್ಚು ಮರಗಳನ್ನು ತೆರವುಗೊಳಿಸುವುದಕ್ಕಾಗಿ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಅರಣ್ಯ ಇಲಾಖೆ ಅನುಮತಿ ಕೋರಿದ್ದರು. ಆದರೆ, ಈ ಮರಗಳಿಂದಾಗಿ ಇಡೀ ರಸ್ತೆಯಲ್ಲಿ ಸೊಂಪಾದ ನೆರಳು ಇತ್ತು. ಮರಗಳ ಆಶ್ರಯದಲ್ಲಿ ಹಲವರು ವ್ಯಾಪಾರ ನಡೆಸುತ್ತಾ ಬದುಕು ಕಟ್ಟಿಕೊಂಡಿದ್ದರು. ಹೀಗಾಗಿ, ಮರಗಳ ಕಡಿತಲೆಗೆ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು.

ಸಸಿ ನೆಡಲು ಒತ್ತಾಯ:  ವಿರೋಧದ ನಡುವೆಯೂ ಮರಗಳನ್ನು ತೆರವುಗೊಳಿಸಲಾಗುತ್ತಿದೆ. ಈ ಭಾಗದಲ್ಲಿ ಇನ್ನಷ್ಟು ಸಸಿಗಳನ್ನು ನೆಟ್ಟು ಪೋಷಿಸಲು ಅರಣ್ಯ ಇಲಾಖೆ ಮತ್ತು ನಗರಪಾಲಿಕೆ ಹಾಗೂ ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !