ಭಾನುವಾರ, ಅಕ್ಟೋಬರ್ 2, 2022
19 °C

ದಾವಣಗೆರೆ: ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಮರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕ್ವಿಟ್ ಇಂಡಿಯಾ ಚಳವಳಿ ನೆನಪಿಗಾಗಿ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ಯೋಧರನ್ನು ಅವರ ಮನೆಗಳಿಗೆ ಮಂಗಳವಾರ ತೆರಳಿ ಸನ್ಮಾನಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹಾಗೂ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಿ ಶ್ರೀಯುತರುಗಳಿಗೆ ಶಾಲು ಹಾರ ಹಾಗೂ ಹಣ್ಣಿನ ಬುಟ್ಟಿಗಳನ್ನು ನೀಡಿ ಅವರ ಹೋರಾಟದ ದಿನಗಳನ್ನು ಮೆಲುಕು ಹಾಕಲಾಯಿತು.

ಕುಂಬಾರಪೇಟೆ ಮರುಳಸಿದ್ದಪ್ಪ, ಬಿ. ಹಾಲಪ್ಪ ಕುಂಬಾರಪೇಟೆ, ಬಿ.ಎಂ. ಶಿವಲಿಂಗಸ್ವಾಮಿ ವಿದ್ಯಾನಗರ, ಎಸ್‌.ಎಸ್‌. ಬಡಾವಣೆಯ ಟಿ.ಎನ್. ಸಿದ್ದರಾಮಪ್ಪ, ತರಳಬಾಳು ಬಡಾವಣೆಯ ತಿಪ್ಪೇಸ್ವಾಮಿ, ಹಳೇಬಿಸಲೇರಿಯ ನೀಲಪ್ಪ, ಹೆಬ್ಬಾಳ್‌ ಶಾಂತ ವೀರಯ್ಯ, ಗೊಪ್ಪೇನಹಳ್ಳಿ ಚನ್ನಬಸಪ್ಪ ಅವರನ್ನು ಗೌರವಿಸಲಾಯಿತು. ಜಿಲ್ಲೆಯ ಉಳಿದ ಕಡೆ ಇರುವ ಸ್ವಾತಂತ್ರ್ಯ ಹೋರಾಟಗಾರರನ್ನು ಆಯಾ ತಾಲ್ಲೂಕಿನ ತಹಶೀಲ್ದಾರ್‌ ಹೋಗಿ ಸನ್ಮಾನಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

ಮೇಯರ್ ಜಯಮ್ಮ ಗೋಪಿನಾಯ್ಕ, ಮಾಜಿ ಮೇಯರ್ ಎಸ್.ಟಿ.ವೀರೇಶ್, ಸನ್ಮಾನಿತರ ಕುಟುಂಬದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು