ಬುಧವಾರ, ಏಪ್ರಿಲ್ 1, 2020
19 °C

ಲಾರಿ ಡಿಕ್ಕಿ: 15 ಮಂದಿ ಸೇವಾಲಾಲ್ ಭಕ್ತರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮಲೆಬೆನ್ನೂರು–ಹೊನ್ನಾಳಿ ಮುಖ್ಯ ರಸ್ತೆಯಲ್ಲಿ ಸಂತ ಸೇವಾಲಾಲ್ ಭಕ್ತರು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಗ್ಯಾಸ್ ತುಂಬಿದ ಲಾರಿ ಡಿಕ್ಕಿ ಹೊಡೆದು 15 ಮಂದಿ ಗಾಯಗೊಂಡಿದ್ದಾರೆ.

ಸೂರಗೊಂಡನಕೊಪ್ಪದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಮುಗಿಸಿಕೊಂಡು ತೆರಳುವ ಈ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡವರು ಕಾಟಿಹಳ್ಳಿ ತಾಂಡಾದ ನಿವಾಸಿಗಳು ಎನ್ನಲಾಗಿದ್ದು, ಗಾಯಗೊಂಡವರನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹೊನ್ನಾಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು