ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯ, ಶುದ್ಧ ಕಾಯಕದ ನುಲಿಯ ಚಂದಯ್ಯ: ಡಿ.ಸಿ.

Last Updated 13 ಆಗಸ್ಟ್ 2022, 4:07 IST
ಅಕ್ಷರ ಗಾತ್ರ

ದಾವಣಗೆರೆ: ನುಲಿಯ ಚಂದಯ್ಯನವರು ಸತ್ಯ, ಶುದ್ಧ, ಕಾಯಕದ ಸಂದೇಶವನ್ನು ನೀಡಿದ್ದು, ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದಲ್ಲಿ ಸಾಗಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸಲಹೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ನುಲಿಯ ಚಂದಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘12ನೇ ಶತಮಾನದಲ್ಲಿ ನುಲಿಯ ಚಂದಯ್ಯ ಅವರು ವಿಶೇಷವಾಗಿ ಕಾಯಕ ತತ್ವವನ್ನು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದರು. ಶರಣರು ಸತ್ಯ, ಶುದ್ಧ ಕಾಯಕದಿಂದ ಬಂದ ಹಣದಿಂದ ದಾಸೋಹಗಳನ್ನು ಏರ್ಪಡಿಸುತ್ತಿದ್ದರು. ಅವರು ಸುಮಾರು 48 ವಚನಗಳ ರಚಿಸಿ ಸತ್ಯ, ಶುದ್ಧ, ಪ್ರಾಮಾಣಿಕ ಸಂದೇಶವನ್ನು ಜನರಿಗೆ ತಿಳಿಸಿದ್ದಾರೆ. ಶ್ರಮಜೀವಿಗಳು ಮಾಡುವ ಕಾಯಕಕ್ಕೆ ಸೂಕ್ತ ಗೌರವ ಸಿಗಬೇಕು ಎಂಬುದು ಅವರ ಮನದಾಳದ ಆಶಯವಾಗಿತ್ತು’ ಎಂದು ಎ.ವಿ.ಕೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಗೀತಾ ಬಸವರಾಜ್ ತಿಳಿಸಿದರು.

‘ಸರ್ಕಾರದ ಆದೇಶದ ಮೇರೆಗೆ ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ನುಲಿಯ ಚಂದಯ್ಯ ಜಯಂತಿಯನ್ನು ಆಚರಿಸುತ್ತಿರುವುದು ನಮ್ಮ ಸಮಜದ ಸೌಭಾಗ್ಯ’ ಎಂದು ಸಮಾಜದ ಮುಖಂಡ ಕುಮಾರ್ ಹೇಳಿದರು.

ಸಮಾಜದ ಮುಖಂಡರಾದ ಆನಂದಪ್ಪ, ವಿರೂಪಾಕ್ಷಪ್ಪ, ಓಂಕಾರಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಸಮಾಜದ ಮುಖಂಡರಾದ ಮಂಜುನಾಥ್, ಮಾರಪ್ಪ, ಗಂಗರಾಜು, ಶ್ರೀನಿವಾಸ್, ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT